ಮಂಗಳೂರು, ಡಿಸೆಂಬರ್ 27, 2025 (ಕರಾವಳಿ ಟೈಮ್ಸ್) : ಕರಾವಳಿ ಉತ್ಸವದ ಅಂಗವಾಗಿ ಫುಟ್ ಬಾಲ್ ಮತ್ತು ವಾಲಿಬಾಲ್ ಕ್ರೀಡಾಕೂಟಕ್ಕೆ ಡಿ 27 ರಂದು ಉಳ್ಳಾಲ ಬೀಚಿನಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ ಪಂದ್ಯಾಟಕ್ಕೆ ಚಾಲನೆ ನೀಡಿದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಸ್ವಾಗತಿಸಿದರು.
ಮೊದಲ ದಿನವಾದ ಶನಿವಾರ 17 ವರ್ಷ ವಯೋಮಾನದೊಳಗಿನವರ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ 6 ತಂಡಗಳು ಮತ್ತು ಬಾಲಕಿಯರ ವಿಭಾಗದಲ್ಲಿ 9 ತಂಡಗಳು ಭಾಗವಹಿಸಿದ್ದವು. ಫುಟ್ ಬಾಲ್ ಪಂದ್ಯಾಟದಲ್ಲಿ 16 ತಂಡಗಳು ಭಾಗವಹಿಸಿತ್ತು. ಡಿ 28 ರಂದು ಭಾನುವಾರ ಸಾರ್ವಜನಿಕರ ಮುಕ್ತ ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ.




















0 comments:
Post a Comment