ಮಂಗಳೂರು, ಡಿಸೆಂಬರ್ 08, 2025 (ಕರಾವಳಿ ಟೈಮ್ಸ್) : 2025-26ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮ ಸ್ಥೆರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ವ್ಯಕ್ತಿ/ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ಬಿಜೈ ಜಿಲ್ಲಾ ಸ್ತ್ರೀಶಕ್ತಿ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.














0 comments:
Post a Comment