ಬಂಟ್ವಾಳ, ಡಿಸೆಂಬರ್ 21, 2025 (ಕರಾವಳಿ ಟೈಮ್ಸ್) : ವಿಟ್ಲ ಸಮೀಪದ ಕೇಪು ಗ್ರಾಮದಲ್ಲಿ ಶನಿವಾರ ಅಕ್ರಮ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು 16 ಮಂದಿಯನ್ನು ಬಂಧಿಸಿ, 22 ಹುಂಜ ಕೋಳಿಗಳು ಹಾಗೂ ಕೃತ್ಯಕ್ಕೆ ಬಳಸಿದ ಕತ್ತಿ (ಬಾಳು) ಗಳನ್ನು ವಶಪಡಿಸಿಕೊಳ್ಳುವುದರ ಜೊತೆ ಕಾನೂನು ಬಾಹಿರ ಕೃತ್ಯಕ್ಕೆ ಜಾಗ ಒದಗಿಸಿದ ಮಾಲಕರ ವಿರುದ್ದ ಹಾಗೂ ಪ್ರಚೋದನೆ ಹಾಗೂ ದುಷ್ಪ್ರೇರಣೆ ನೀಡಿದ ಆರೋಪದ ಮೇರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ವಿರುದ್ದವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಿಸೆಂಬರ್ 20 ರಂದು ಮಧ್ಯಾಹ್ನ ಸಮಯ, ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನು ಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್, ಠಾಣಾ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭ ಹಲವು ಮಂದಿ ಕೋಳಿ ಅಂಕಕ್ಕೆ ಬಳಸುವ ಕೋಳಿಗಳನ್ನು ಹಿಡಿದುಕೊಂಡು ಗುಂಪು ಸೇರಿರುವುದು ಕಂಡುಬಂದಿದೆ. ಅಲ್ಲಿ ಸೇರಿದ್ದ ಜನರಿಗೆ ಪೊಲೀಸರು ಕಾನೂನು ಬಾಹಿರ ಕೋಳಿ ಅಂಕದ ಬಗ್ಗೆ ಸೂಕ್ತ ಕಾನೂನು ತಿಳುವಳಿಕೆ ನೀಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು, ಸ್ಥಳದಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿದ್ದಾರೆ. ಸ್ಥಳದಲ್ಲಿ ಸೇರಿದ್ದ ಜನರು ಕಾನೂನು ಬಾಹಿರವಾಗಿ ಕೋಳಿ ಅಂಕ ಆಟವನ್ನು ಪ್ರಾರಂಭಿಸಿರುತ್ತಾರೆ. ಈ ವೇಳೆ ವಿಟ್ಲ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಅಗತ್ಯ ಪೆÇಲೀಸ್ ಭದ್ರತೆಯನ್ನು ಏರ್ಪಡಿಸಿ ಸದ್ರಿ ಕಾನೂನು ಬಾಹಿರವಾಗಿ ಕೋಳಿ ಅಂಕ ಆಟ ಆಡುತ್ತಿದ್ದ 16 ಜನರನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು (ಕತ್ತಿಗಳನ್ನು) ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಮರಳೀಧರ ರೈ ಎಂಬವರು ತಮ್ಮ ಬಾಬ್ತು ಜಾಗದಲ್ಲಿ ಯಾವುದೇ ಸೂಕ್ತ ಪರವಾನಿಗೆ ಪಡೆಯದೇ, ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ, ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಶಾಸಕರ ವಿರುದ್ಧ ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 16 ಜನರ ವಿರುದ್ಧ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 190/2025, ಕಲಂ 189(2), 49, 221, 223, 190 ಬಿ ಎನ್ ಎಸ್-2023 ಪ್ರಾಣಿಗಳ ವಿರುದ್ದ ಕ್ರೂರತೆ ತಡೆಗಟ್ಟುವ ಕಾಯ್ದೆ-1960 ಕಲಂ 3,11 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




















0 comments:
Post a Comment