ಮಂಗಳೂರು, ಡಿಸೆಂಬರ್ 26, 2025 (ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರಪಾಲಿಕೆಯ 2026-27 ನೇ ಸಾಲಿನ ಬಜೆಟ್ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎರಡು ಸುತ್ತಿನ ಸಾರ್ವಜನಿಕ ಸಮಾಲೋಚನೆ ನಡೆಸಬೇಕಾಗಿರುವುದರಿಂದ, ಮೊದಲನೇ ಸುತ್ತಿನ ಸಭೆಯನ್ನು ಡಿಸೆಂಬರ್ 29 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಆಡಳಿತಾಧಿಕಾರಿ ಆಗಿರುವ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಯಲ್ಲಿ 2026-27ನೇ ಸಾಲಿನ ಪಾಲಿಕೆಯ ಬಜೆಟ್ ತಯಾರಿಕೆಗೆ ಸಾರ್ವಜನಿಕ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸÀಲಾಗುತ್ತದೆ. ಸಭೆಗೆ ನೋಂದಾಯಿತ ವಸತಿ ಕ್ಷೇಮಾಭಿವೃದ್ದಿ ಸಂಘಗಳು, ನೋಂದಾಯಿತ ಸರಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















0 comments:
Post a Comment