ಕಬಕದಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - Karavali Times ಕಬಕದಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - Karavali Times

728x90

3 December 2025

ಕಬಕದಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಪುತ್ತೂರು, ಡಿಸೆಂಬರ್ 04, 2025 (ಕರಾವಳಿ ಟೈಮ್ಸ್) : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಬಕ ಗ್ರಾಮದ ಮುರ ಎಂಬಲ್ಲಿ ಪುತ್ತೂರು ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಹೆಸರಿಸಲಾಗಿದೆ. ಡಿ 3 ರಂದು ಬೆಳಿಗ್ಗೆ ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿರುವ ರೈಲ್ವೇ ಬ್ರಿಡ್ಜ್ ಬಳಿ ವ್ಯಕ್ತಿಯೋರ್ವ ಮಾದಕ ವಸ್ತು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ಪಿಎಸ್ಸೈ ಆಂಜನೇಯ ರೆಡ್ಡಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. 

ಆರೋಪಿಯ ದ್ವಿಚಕ್ರ ವಾಹನ ತಪಾಸಣೆ ನಡೆಸಿದಾಗ ಆತ ಮಾರಾಟ ಮಾಡಲು ಅಕ್ರಮವಾಗಿ ಇಟ್ಟುಕೊಂಡಿದ್ದ 10 ಗ್ರಾಂ ಎಂಡಿಎಂ ನಿಷೇಧಿತ ಮಾದಕವಸ್ತು  ಪತ್ತೆಯಾಗಿದೆ. ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ರಿ ಆರೋಪಿಯ ಪ್ರಾಥಮಿಕ ವಿಚಾರಣೆ ವೇಳೆ, ಈತನ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಪೆÇಲೀಸ್ ಠಾಣೆಗಳಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಬಕದಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ Rating: 5 Reviewed By: karavali Times
Scroll to Top