ಮಂಗಳೂರು, ಡಿಸೆಂಬರ್ 15, 2025 (ಕರಾವಳಿ ಟೈಮ್ಸ್) : ಮಾದಕ ವಸ್ತು ಮಾಫಿಯಾ ವಿರುದ್ದ ಮಂಗಳೂರು ಪೊಲೀಸರ ಸಮರ ಮುಂದುವರೆದಿದೆ. ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಖಾಕಿ ಪಡೆ ಮಂಗಳೂರಿನ ಡ್ರಗ್ ಪೆಡ್ಲರುಗಳಿಗೆ ಮಾದಕ ವಸ್ತು ಎಂಡಿಎಂಎ ಸಪ್ಲೈ ಮಾಡುತ್ತಿದ್ದ ತಂಡದ ಮೂವರನ್ನು ಬಂಧಿಸಿದೆ.
ಬಂಧಿತ ಆರೋಪಿಗಳನ್ನು ಮೂಲತಃ ಮಂಗಳೂರು ತಾಲೂಕು, ಮಲ್ಲೂರು ಬದ್ರಿಯಾ ನಗರ ನಿವಾಸಿ, ಪ್ರಸ್ತುತ ಬಿ ಮೂಡ ಗ್ರಾಮದ ಜೋಡುಮಾರ್ಗ, ಬಿ ಸಿ ರೋಡು ಸಮೀಪದ ಕೈಕಂಬ-ಶಾಂತಿಅಂಗಡಿ ಪಿಕಪ್ ಜಬ್ಬಾರ್ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಎಸ್ ಅಬ್ದುಲ್ ರಜಾಕ್ ಅವರ ಮಗ ಅಹಮ್ಮದ್ ಶಾಬೀತ್ (35), ಬಿ ಮೂಡ ಗ್ರಾಮದ ಬಿ ಸಿ ರೋಡು ಸಮೀಪದ ಕೈಕಂಬ, ಮದ್ದ-ಪರ್ಲಿಯಾ ನಿವಾಸಿ ಎಸ್ ಅಹ್ಮದ್ ಅವರ ಮಗ ಮಹಮ್ಮದ್ ಶಂಶೀರ್ (36) ಹಾಗೂ ಸರಪಾಡಿ ಗ್ರಾಮದ ಮಠದಬೆಟ್ಟು ನಿವಾಸಿ ಉಮರಬ್ಬ ಎಂಬವರ ಪುತ್ರಿ ಶ್ರೀಮತಿ ನೌಶೀನ (27) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂಎ ತಂದು ಮಂಗಳೂರಿನ ಡ್ರಗ್ ಪೆಡ್ಲರುಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಡಿ 13 ರಂದು ಕಾರಿನಲ್ಲಿ ಬರುತ್ತಿದ್ದ ಆರೋಪಿಗಳ ತಂಡವನ್ನು ಅರ್ಕುಳ ಯಶಸ್ವಿ ಹಾಲ್ ಬಳಿ ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳಿಂದ 90 ಗ್ರಾಂ ಎಂಡಿಎಂ, ಬಿಳಿ ಬಣ್ಣದ ಕೆಎಲ್58 ಡಬ್ಲ್ಯು 6342 ನೋಂದಣಿ ಸಂಖ್ಯೆಯ ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೆÇೀನುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಹಮ್ಮದ್ ಶಾಬೀತ್ ಎಂಬುವನು ಮಂಗಳೂರಿನ ಡ್ರಗ್ ಪೆಡ್ಲರುಗಳಿಗೆ £ರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎ ತಂದು ಸರಬರಾಜು ಮಾಡುತ್ತಿದ್ದು, ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತು ಸಾಗಾಟ ಮಾಡುತ್ತಿರುವುದ್ದನ್ನು, ಮಂಗಳೂರು ನಗರದ ಸಿಸಿಬಿ ಘಟಕದ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ ತಂಡವನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
















0 comments:
Post a Comment