ಮಂಗಳೂರು, ಡಿಸೆಂಬರ್ 21, 2025 (ಕರಾವಳಿ ಟೈಮ್ಸ್) : 2008 ರಲ್ಲಿ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾದ ಆರೋಪಿಗೆ ಮಂಗಳೂರು ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೊಳಗಾದ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕು, ತೋಟತ್ತಡಿ ಗ್ರಾಮದ ತೆಕ್ಕೆಲ್ ನಿವಾಸಿ ಎಸ್ತಪ್ಪನ್ ಎಂಬವರ ಪುತ್ರ ಜೋಸೆಫ್ ಟಿ ಇ ಎಂದು ಹೆಸರಿಸಲಾಗಿದೆ.
ಸದ್ರಿ ಪ್ರಕರಣದಲ್ಲಿ ಆರೋಪಿತನಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶ್ರೀಮತಿ ಜುಡಿತ್ ಓಲ್ಗ ಮಾರ್ಗರೇಟ್ ಕ್ರಾಸ್ತಾ ಅವರು ವಾದ ಮಂಡಿಸಿದ್ದಾರೆ. ಪ್ರಕರಣದಲ್ಲಿ ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಮುಕುಂದ ನಾಯಕ್ ಅವರು ಸಂಪೂರ್ಣ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
2018 ರ ಅಕ್ಟೋಬರ್ 11 ರಂದು ಬೆಳಿಗ್ಗೆ 9.30 ರ ವೇಳೆಗೆ ಮಂಗಳೂರು ತಾಲೂಕು ನೀರೇಶ್ವಾಲ್ಯ ಗ್ರಾಮದ ಬಂದರು ಬೈಹುಲ್ಲಿನ ದಕ್ಕೆಯ ಹೊಳೆಯ ಬದಿಯಲ್ಲಿ ಒಬ್ಬ ವ್ಯಕ್ತಿಯು ಮಾದಕ ವಸ್ತು ಗಾಂಜಾದ ಕಟ್ಟನ್ನು ಕೈಯಲ್ಲಿ ಹಿಡಿದುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಕಾಯುತ್ತಿರುವುದಾಗಿ ಮಂಗಳೂರು ಕರಾವಳಿ ಕಾವಲು ಪೆÇಲೀಸ್ ಠಾಣೆಯ ಪೆÇಲೀಸ್ ಇನ್ಸ್ ಪೆಕ್ಟರ್ ಮುಕುಂದ ನಾಯಕ್ ಅವರಿಗೆ ಬಂದ ಖಚಿತ ಮಾಹಿತಿಯ ಅನುಸಾರ ತಂಡದೊಂದಿಗೆ ಸದ್ರಿ ಸ್ಥಳಕ್ಕೆ ಬೆಳಿಗ್ಗೆ 10 ಗಂಟೆಗೆ ದಾಳಿ ನಡೆಸಿ ಆರೋಪಿ ಟಿ ಇ ಜೋಸೆಫ್ ನನ್ನು ವಶಕ್ಕೆ ಪಡೆದು ಆತನ ವಶದಲ್ಲಿದ್ದ ಒಟ್ಟು 2 ಕೆಜಿ 300 ಗ್ರಾಂ ತೂಕದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಈ ಬಗ್ಗೆ ಮಂಗಳೂರು ಕರಾವಳಿ ಕಾವಲು ಪೆÇಲೀಸ್ ಠಾಣೆಯ ಅಪರಾಧ ಕ್ರಮಾಂಕ 09/2008 ರಲ್ಲಿ ಎನ್ ಡಿ ಪಿ ಎಸ್ ಕಾಯಿದೆ ಕಲಂ 8ಸಿ 20 ಬಿ (2) ಅನ್ವಯ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪೂರಕ ತನಿಖೆ ನಡೆಸಿ ಮಾದಕ ವಸ್ತುವನ್ನು ಫೆÇೀರೆನ್ಸಿಕ್ ಲ್ಯಾಬ್ ಗೆ ಕಳುಹಿಸಿ ವರದಿ ಪಡೆದು ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ನಂತರದಲ್ಲಿ ಆರೋಪಿ ಜಾಮೀನು ಪಡೆದು ಹೊರಬಂದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, 2024 ರ ಫೆಬ್ರವರಿ 22 ರಂದು ಆತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.














0 comments:
Post a Comment