ಮಂಗಳೂರು, ಡಿಸೆಂಬರ್ 24, 2025 (ಕರಾವಳಿ ಟೈಮ್ಸ್) : ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ ಪಿಲಿಕುಳÀ ಬಳಿ ಇರುವ ದೂರದರ್ಶನ ಕೇಂದ್ರದ ಎದುರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಾಮಂಜೂರು ನಿವಾಸಿ ಮೊಹಮ್ಮದ್ ಶಾರೂಖ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ ಒಟ್ಟು 350 ಗ್ರಾಂ ತೂಕದ ಗಾಂಜಾ, ಮೊಬೈಲ್ ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿರುವ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಂಗಳೂರು ಗ್ರಾಮಾಂತರ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಗವಿರಾಜ್ ಆರ್.ಪಿ ಅವರ ನಿರ್ದೆಶನದಂತೆ ಪೆÇಲೀಸ್ ಉಪ ನಿರೀಕ್ಷಕ ಅರುಣ್ ಕುಮಾರ್ ಡಿ ಹಾಗೂ ಕ್ರೈಂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.



















0 comments:
Post a Comment