ನಕಲಿ ವಿಳಾಸ ನೀಡಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದಾತಗೆ ಶಿಫಾರಸ್ಸು : ವಿಟ್ಲ ಠಾಣಾ ಪೊಲೀಸ್ ಸಿಬ್ಬಂದಿ ಅರೆಸ್ಟ್ - Karavali Times ನಕಲಿ ವಿಳಾಸ ನೀಡಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದಾತಗೆ ಶಿಫಾರಸ್ಸು : ವಿಟ್ಲ ಠಾಣಾ ಪೊಲೀಸ್ ಸಿಬ್ಬಂದಿ ಅರೆಸ್ಟ್ - Karavali Times

728x90

23 December 2025

ನಕಲಿ ವಿಳಾಸ ನೀಡಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದಾತಗೆ ಶಿಫಾರಸ್ಸು : ವಿಟ್ಲ ಠಾಣಾ ಪೊಲೀಸ್ ಸಿಬ್ಬಂದಿ ಅರೆಸ್ಟ್

ಬಂಟ್ವಾಳ, ಡಿಸೆಂಬರ್ 23, 2025 (ಕರಾವಳಿ ಟೈಮ್ಸ್) : ನಕಲಿ ವಿಳಾಸ ನೀಡಿ ಪಾಸ್ ಪೋರ್ಟ್ ಮಾಡಲು ಯತ್ನಿಸಿದ ಆರೋಪಿಯ ಪೊಲೀಸ್ ಪರಿಶೀಲನೆ ವಾಮಮಾರ್ಗದಲ್ಲಿ ಮಾಡಿಕೊಟ್ಟ ವಿಟ್ಲ ಪೆÇಲೀಸ್ ಠಾಣಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ,

ಬಂಧಿತ ಪೊಲೀಸ್ ಸಿಬ್ಬಂದಿಯನ್ನು ಪ್ರದೀಪ್ ಎಂದು ಹೆಸರಿಸಲಾಗಿದೆ. ವಿಟ್ಲ ವ್ಯಾಪ್ತಿಯ ವಿಳಾಸದಲ್ಲಿ ವಾಸಿಸುತ್ತಿರುವುದಾಗಿ ಶಕ್ತಿದಾಸ್ ಎಂಬಾತ 2025ನೇ ಫೆಬ್ರವರಿ ತಿಂಗಳಲ್ಲಿ ಪಾಸ್ ಪೆÇರ್ಟ್ ಪಡೆಯಲು ಅರ್ಜಿ ಸಲ್ಲಿಸಿದ್ದು, ಸದ್ರಿ ಅರ್ಜಿಯ ಬಗ್ಗೆ ಪೆÇಲೀಸ್ ವೆರಿಫಿಕೇಶನ್ ಮಾಡುವ ವೇಳೆ ಅರ್ಜಿದಾರರ ವಿಳಾಸವು ದಾಖಲಾತಿಗಳಲ್ಲಿನ ವಿಳಾಸಕ್ಕೆ ತಾಳೆಯಾಗದಿರುವುದರಿಂದ ನಾ-ಶಿಫಾರಸ್ಸು ಮಾಡಲಾಗಿರುತ್ತದೆ. ಸದ್ರಿ ವ್ಯಕ್ತಿಯು 2025ನೇ ಇಸವಿಯ ಜೂನ್ ತಿಂಗಳಲ್ಲಿ ಮರು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಸದ್ರಿ ಮರು ಅರ್ಜಿಯನ್ನು ವಿಟ್ಲ ಪೆÇಲೀಸ್ ಠಾಣಾ ಸಿಬ್ಬಂದಿಯಾದ ಆರೋಪಿ ಪ್ರದೀಪ್ ಎಂಬವರು, ಸದ್ರಿ ಅರ್ಜಿದಾರರ ವಿಳಾಸವಿರುವ ಬೀಟ್ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಅರಿವಿಗೆ ಬಾರದಂತೆ, ಬೀಟ್ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಹೆಸರಿನಲ್ಲಿ ವರದಿ ತಯಾರಿಸಿ, ಬೀಟ್ ಸಿಬ್ಬಂದಿಯ ಸಹಿಯನ್ನು ಫೆÇೀರ್ಜರಿ ಮಾಡಿ, ಮೇಲಾಧಿಕಾರಿಯವರಿಂದ ಶಿಫಾರಸ್ಸು ಮಾಡಿಸಿ ಕಳುಹಿಸಿಕೊಟ್ಟಿರುವುದಾಗಿದೆ ಹಾಗೂ ಪರಿಶೀಲನಾ ದಾಖಲೆಗಳನ್ನು ಯಾರಿಗೂ ಗೊತ್ತಾಗಬಾರದೆಂದು ನಾಶಪಡಿಸಿರುವುದಾಗಿದೆ. 

ಡಿಸೆಂಬರ್ 19 ರಂದು ದಾಖಲೆ ಪರಿಶೀಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕೇಂದ್ರ ಸರಕಾರದಿಂದ ನೀಡಲ್ಪಡುವ ಅತೀ ಪ್ರಮುಖ ಗುರುತಿನ ಚೀಟಿಯಾಗಿರುವ ಪಾಸ್ ಪೋರ್ಟನ್ನು ಅಪರಾಧಿಕ ನಂಬಿಕೆ ದ್ರೋಹ ಬಗೆದು ಶಕ್ತಿದಾಸ ಎಂಬವರಿಗೆ ಪಾಸ್ ಪೆÇೀರ್ಟ್ ಹಾಗೂ ಪೆÇಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ಮಾಡಿ ಕಡತವನ್ನು ನಾಶಪಡಿಸಿದ ಹಿನ್ನೆಲೆಯಲ್ಲಿ ವಿಟ್ಲ ಪೆÇಲೀಸ್ ಠಾಣಾ ಸಿಬ್ಬಂದಿ  ಪ್ರದೀಪ್ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಪಾಸ್ ಪೋರ್ಟ್ ಪಡೆದ ಶಕ್ತಿದಾಸ್ ಎಂಬವರ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 193/2025, ಕಲಂ 336, 337, 316(5), 238 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ. 

ಆರೋಪಿತ ಪ್ರದೀಪ್ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ಆರೋಪಿತನಾದ ಶಕ್ತಿ ದಾಸ್ ಎಂಬಾತನು ಪೆÇಲೀಸ್ ವಶದಲ್ಲಿದ್ದು, ವಿಚಾರಣೆಯ ವೇಳೆ ಆರೋಪಿತನು ತಾನು ಪಶ್ಚಿಮ ಬಂಗಾಳ ನಿವಾಸಿಯೆಂದು ತಿಳಿಸಿರುತ್ತಾನೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಆತನ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆರೋಪಿತ ಪ್ರದೀಪ್ ಎಂಬಾತನನ್ನು ಡಿ 22 ರಂದು ಇಲಾಖಾ ಕರ್ತವ್ಯದಿಂದ ಅಮಾನತ್ತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ನಕಲಿ ವಿಳಾಸ ನೀಡಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದಾತಗೆ ಶಿಫಾರಸ್ಸು : ವಿಟ್ಲ ಠಾಣಾ ಪೊಲೀಸ್ ಸಿಬ್ಬಂದಿ ಅರೆಸ್ಟ್ Rating: 5 Reviewed By: karavali Times
Scroll to Top