ಮಂಗಳೂರು, ಡಿಸೆಂಬರ್ 19, 2025 (ಕರಾವಳಿ ಟೈಮ್ಸ್) : ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪ್ರಗತಿ, ಬೇಸಿಗೆ ಕಾಲದಲ್ಲಿ ಅಣೆಕಟ್ಟುಗಳ ಗೇಟುಗಳನ್ನು ಮುಚ್ಚುವ ಬಗ್ಗೆ, ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಕಾರ್ಯಾಚರಣೆ, ನಿರ್ವಹಣೆ ಹಾಗೂ ಮತತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ನೋಡಲ್ ಅಧಿಕಾರಿ ಜಯಲಕ್ಷ್ಮೀ ರಾಯಕೋಡ್, ಕಾರ್ಯನಿರ್ವಾಹಕ ಇಂಜಿನಿಯರ್ ಜೈ ಪ್ರಕಾಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.














0 comments:
Post a Comment