ಹೊಸ ವರ್ಷಾಚರಣೆ ಬಗ್ಗೆ ಪೊಲೀಸ್ ಇಲಾಖೆಯ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಕಮಿಷನರ್ ಸುಧೀರ್ ರೆಡ್ಡಿ ಸೂಚನೆ - Karavali Times ಹೊಸ ವರ್ಷಾಚರಣೆ ಬಗ್ಗೆ ಪೊಲೀಸ್ ಇಲಾಖೆಯ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಕಮಿಷನರ್ ಸುಧೀರ್ ರೆಡ್ಡಿ ಸೂಚನೆ - Karavali Times

728x90

30 December 2025

ಹೊಸ ವರ್ಷಾಚರಣೆ ಬಗ್ಗೆ ಪೊಲೀಸ್ ಇಲಾಖೆಯ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಕಮಿಷನರ್ ಸುಧೀರ್ ರೆಡ್ಡಿ ಸೂಚನೆ

ಮಂಗಳೂರು, ಡಿಸೆಂಬರ್ 30, 2025 (ಕರಾವಳಿ ಟೈಮ್ಸ್) : 2026ರ ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೆÇಲೀಸ್ ಇಲಾಖೆಯ ವತಿಯಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಲಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುವಂತೆ ಪೊಲೀಸ್ ಇಲಾಖೆ ಸೂಚಿಸಿದೆ, 

ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ ಕಿರುಕುಳ ಆಗದಂತೆ ಜವಾಬ್ದಾರಿತಯತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀ ವೇಗದ ಚಾಲನೆ, ವೀಲಿಂಗ್ ನಡೆಸುವುದು, ಅಸಭ್ಯ ವರ್ತನೆಯಂತಹ ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ನಗರದಾದ್ಯಂತ ಬಂದೋಬಸ್ತ್ ಕರ್ತವ್ಯದ ಬಗ್ಗೆ ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್ ಪೆÇೀಸ್ಟ್ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆ.ಎಸ್.ಆರ್.ಪಿ. ತುಕಡಿಗಳು, ಎಫ್.ಎ.ಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆಗೆ ಕರೆ ಮಾಡುವುದು. 112 ಸಂಖ್ಯೆಯು ಕರೆಗೆ ಲಭ್ಯವಾಗದೇ ಇದ್ದಲ್ಲಿ ಮಂಗಳೂರು ನಗರ ಪೆÇಲೀಸ್ ಕಂಟ್ರೋಲ್ ರೂಂ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಹೊಸ ವರ್ಷಾಚರಣೆ ಬಗ್ಗೆ ಪೊಲೀಸ್ ಇಲಾಖೆಯ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಕಮಿಷನರ್ ಸುಧೀರ್ ರೆಡ್ಡಿ ಸೂಚನೆ Rating: 5 Reviewed By: karavali Times
Scroll to Top