ಬಲ್ಮಠ-ಫಳ್ನೀರ್ ರಸ್ತೆಯಲ್ಲಿ ಹಾಗೂ ಪಣಂಬೂರು ಪೊಲೀಸ್ ಠಾಣೆ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ನಿಷೇಧಿಸಿ ಪೊಲೀಸ್ ಕಮಿಷನರ್ ಆದೇಶ - Karavali Times ಬಲ್ಮಠ-ಫಳ್ನೀರ್ ರಸ್ತೆಯಲ್ಲಿ ಹಾಗೂ ಪಣಂಬೂರು ಪೊಲೀಸ್ ಠಾಣೆ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ನಿಷೇಧಿಸಿ ಪೊಲೀಸ್ ಕಮಿಷನರ್ ಆದೇಶ - Karavali Times

728x90

11 December 2025

ಬಲ್ಮಠ-ಫಳ್ನೀರ್ ರಸ್ತೆಯಲ್ಲಿ ಹಾಗೂ ಪಣಂಬೂರು ಪೊಲೀಸ್ ಠಾಣೆ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ನಿಷೇಧಿಸಿ ಪೊಲೀಸ್ ಕಮಿಷನರ್ ಆದೇಶ

ಮಂಗಳೂರು, ಡಿಸೆಂಬರ್ 11, 2025 (ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬೆಂದೂರು ವಾರ್ಡಿನ ಯುನಿಟಿ ಆಸ್ಪತ್ರೆಯಿಂದ ಬಲ್ಮಠ ರಸ್ತೆಗೆ ಸಂಪರ್ಕಿಸುವ ವಾಸ್ ಲೇನ್ ರಸ್ತೆಯನ್ನು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಂಗಳೂರು ಮಹಾನಗರ ಪಾಲಿಕೆಯಿಂದ ಅಗಲೀಕರಣಗೊಳಿಸಿ ರಸ್ತೆ ಬದಿಗಳನ್ನು ಇಂಟರ್ ಲಾಕಿನಿಂದ ನಿರ್ಮಾಣ ಮಾಡಲಾಗಿದೆ. ರಸ್ತೆಯು ಫಳ್ನೀರು ರಸ್ತೆ ಹಾಗೂ ಬಲ್ಮಠ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ಮುಖ್ಯ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಕಾರು ದ್ವಿಚಕ್ರ ಹಾಗೂ ಇತ್ಯಾದಿ ವಾಹನಗಳು ಸಂಚರಿಸುತ್ತಿರುವುದರಿಂದ ವಾಸ್ ಲೇನ್ ರಸ್ತೆಯು ಹೆಚ್ಚಿನ ವಾಹನ ದಟ್ಟಣೆಯಿಂದ ಕೂಡಿದ ರಸ್ತೆಯಾಗಿರುತ್ತದೆ. ಅಲ್ಲದೇ ಫಳ್ನೀರು ರಸ್ತೆಯಲ್ಲಿ ಯುನಿಟಿ, ಹೈಲ್ಯಾಂಡ್ ಆಸ್ಪತ್ರೆಗಳಿದ್ದು ಮತ್ತು ಬಲ್ಮಠ ರಸ್ತೆಯಲ್ಲಿ ಅನೇಕ ಆಸ್ಪತ್ರೆಗಳಿರುವುದರಿಂದ ತುರ್ತು ವಾಹನಗಳ ಹೆಚ್ಚಿನ ಸಂಚಾರ ಇರುತ್ತದೆ. 

ವಾಸ್‍ಲೇನ್ ರಸ್ತೆಯ ಎರಡೂ ಬದಿ ಹೆಚ್ಚಿನ ವಸತಿ ಸಮುಚ್ಚಯಗಳಿದ್ದು, ರಸ್ತೆಯ ಪ್ರಾರಂಭದ ಫಳ್ನೀರು ರಸ್ತೆಯಲ್ಲಿ ಯುನಿಟಿ ಆಸ್ಪತ್ರೆ, ವಾಣಿಜ್ಯ ಕಟ್ಟಡಗಳು, ಅನೇಕ ವೈದ್ಯರ ಕ್ಲಿನಿಕ್ ಗಳಿದ್ದು ಇಲ್ಲಿಗೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ವಾಹನ ಪಾರ್ಕ್ ಮಾಡುತ್ತಿದ್ದಾರೆ. ಪರಿಣಾಮ ಮುಖ್ಯ ರಸ್ತೆಯಾದ ಫಳ್ನೀರು ರಸ್ತೆ ಹಾಗೂ ಬಲ್ಮಠ ರಸ್ತೆಯಲ್ಲಿ ಕೂಡಾ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತಿರುತ್ತದೆ. ವಾಸ್ ಲೇನ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದಲೂ ದೂರುಗಳು ಬಂದಿವೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಗರದ ಯುನಿಟಿ ಆಸ್ಪತ್ರೆಯಿಂದ ಬಲ್ಮಠ ರಸ್ತೆಗೆ ಸಂಪರ್ಕಿಸುವ ವಾಸ್ ಲೇನ್ ರಸ್ತೆಯಲ್ಲಿ ವಾಸ್ ಲೇನ್ ಒಂದನೇ ಅಡ್ಡ ರಸ್ತೆಯಿಂದ ಯುನಿಟಿ ಆಸ್ಪತ್ರೆಯವರೆಗೆ (ರಸ್ತೆಯ ಬಲಬದಿ-ಪಶ್ಚಿಮ ದಿಕ್ಕು) ವಾಹನಗಳ ನಿಲುಗಡೆಯನ್ನು ನಿಷೇಧಿಸಿ ‘’ನೋ ಪಾರ್ಕಿಂಗ್ ವಲಯ’’ ಎಂದು ಘೋಷಿಸಿ ಮಂಗಳೂರು ನಗರ ಪೆÇಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ-66ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೆÇಲೀಸ್ ಠಾಣೆಯವರೆಗೆ ರಸ್ತೆಯಲ್ಲಿ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಘನ ಸರಕು ವಾಹನಗಳು ಹಾಗೂ ಇತರ ವಾಹನಗಳು ಸಂಚರಿಸುತ್ತಿರುವುದರಿಂದ ಹೆಚ್ಚಾಗಿ ವಾಹನ ದಟ್ಟಣೆಯಿಂದ ಕೂಡಿದ ರಸ್ತೆಯಾಗಿರುತ್ತದೆ. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಬೃಹತ್ ಕೈಗಾರಿಕಾ ಕಂಪೆನಿಗಳಿದ್ದು, ಈ ಕಂಪೆನಿಗಳಿಗೆ ಸರಕು ವಸ್ತುಗಳನ್ನು ಸಾಗಾಟ ಮಾಡಲು ಬೃಹತ್ ಗಾತ್ರದ ಹೆಚ್ಚಿನ ಸಂಖ್ಯೆಯಲ್ಲಿ ಘನ ವಾಹನಗಳ ಓಡಾಟವಿರುತ್ತದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಪಾದಚಾರಿಗಳು ನಡೆದಾಡಲು ಹಾಗೂ ಇತರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. 

ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ  ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-66ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೆÇಲೀಸ್ ಠಾಣೆಯವರೆಗೆ ರಸ್ತೆಯಲ್ಲಿ  ವಾಹನಗಳ ನಿಲುಗಡೆ ನಿಷೇಧಿಸಿ ‘’ನೋ ಪಾರ್ಕಿಂಗ್ ವಲಯ’’ ಎಂದು ಮಂಗಳೂರು ನಗರ ಪೆÇಲೀಸ್ ಆಯುಕ್ತರು ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಲ್ಮಠ-ಫಳ್ನೀರ್ ರಸ್ತೆಯಲ್ಲಿ ಹಾಗೂ ಪಣಂಬೂರು ಪೊಲೀಸ್ ಠಾಣೆ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ನಿಷೇಧಿಸಿ ಪೊಲೀಸ್ ಕಮಿಷನರ್ ಆದೇಶ Rating: 5 Reviewed By: karavali Times
Scroll to Top