ಬಂಟ್ವಾಳ, ಡಿಸೆಂಬರ್ 09, 2025 (ಕರಾವಳಿ ಟೈಮ್ಸ್) : ಓಮ್ನಿ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರೆ ಗಾಯಗೊಂಡ ಘಟನೆ ಕಾವಳಪಡೂರು ಗ್ರಾಮದಲ್ಲಿ ಡಿ 6 ರಂದು ಸಂಜೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರೆಯನ್ನು ಕಾವಳಪಡೂರು ಗ್ರಾಮದ ಮದ್ದ ನಿವಾಸಿ ಆಶಾಲತಾ (49) ಎಂದು ಹೆಸರಿಸಲಾಗಿದೆ. ಇವರು ಡಿ 6 ರಂದು ಸಂಜೆ ಕೆಲಸ ಮುಗಿಸಿ ಸ್ಕೂಟರಿನಲ್ಲಿ ಬರುತ್ತಿದ್ದ ವೇಳೆ ಕಾವಳಪಡೂರು ಎಂಬಲ್ಲಿ ಮನೆ ಕಡೆಗೆ ಹೋಗಲು ಬಲ ಬದಿಗೆ ಸೂಚನೆ ನೀಡಿ ಸ್ಕೂಟರ್ ತಿರುಗಿಸುತ್ತಿದ್ದ ವೇಳೆ ಹಿಂಬದಿಯಿಂದ ಅಂದರೆ ಕಾವಳಮೂಡೂರು ಕಡೆಯಿಂದ ಮಂಗಳೂರು ಕಡೆಗೆ ಸಂತೋಷ್ ಎಂಬವರು ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆ ಬಿದ್ದ ಆಶಾಲತಾ ಅವರು ಗಾಯಗೊಂಡಿದ್ದು, ಅವರನ್ನು ಅವರ ಮಗ ಪ್ರಥಮ ಅವರು ಬಂಟ್ವಾಳ ಸರಕಾರಿ ಆಸ್ವತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ವತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment