ಬಂಟ್ವಾಳ, ಡಿಸೆಂಬರ್ 04, 2025 (ಕರಾವಳಿ ಟೈಮ್ಸ್) : ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಗಾಯಗೊಂಡ ಘಟನೆ ಬಡಗಬೆಳ್ಳೂರು ಗ್ರಾಮದ ಪಲ್ಲಿಪ್ಪಾಡಿ ಎಂಬಲ್ಲಿ ನ 30 ರಂದು ಸಂಜೆ ಸಂಭವಿಸಿದ್ದು, ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡವರನ್ನು ಸ್ಥಳೀಯ ನಿವಾಸಿ ಶೇಖ್ ಅಬ್ದುಲ್ ಲತೀಫ್ ಎಂಬವರ ಪುತ್ರ ಲಿಯಾಹುಲ್ ಹಕ್ ಎಂದು ಹೆಸರಿಸಲಾಗಿದೆ. ಈತ ನ 30 ಸಂಜೆ 7.30 ರ ವೇಳೆಗೆ ಕರಿಯಂಗಳ ಗ್ರಾಮದ ಪಲ್ಲಿಪಾಡಿ ದಕ್ಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನೌಷಾದ್ ಎಂಬವರು ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಲಿಯಾಹುಲ್ ಹಕ್ ಅವರ ಬಲಕಾಲು ತೊಡೆಗೆ, ಬಲಕೈಗೆ, ಬಲ ಮೊಣಕಾಲಿಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರು ಯೇನಪೆÇೀಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.














0 comments:
Post a Comment