ಬಂಟ್ವಾಳ, ಡಿಸೆಂಬರ್ 08, 2025 (ಕರಾವಳಿ ಟೈಮ್ಸ್) : ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಫಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಡಿ 6 ರಂದು ಮಧ್ಯಾಹ್ನ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ನವೀನ್ ಎಂದು ಹೆಸರಿಸಲಾಗಿದೆ. ಇವರು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಣಿ ಕಡೆಯಿಂದ ಬೆಂಗಳೂರು ಕಡೆಗೆ ಹೆದ್ದಾರಿ ಪಥದ ವಿರುದ್ಧ ದಿಕ್ಕಿನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿ ಪೆರಮೊಗ್ರು ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಎಸ್ ಮಹಮ್ಮದ್ ಎಂಬವರು ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹಾದು ಹೋಗುವ ರಸ್ತೆಯಿಂದ ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹಾದುಹೋಗುವ ರಸ್ತೆಗೆ ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಿಂದ ಬೈಕ್ ಸವಾರ ನವೀನ್ ಬೈಕ್ ಸಮೇತ ರಸ್ತೆಗೆ ಬಿದ್ದು ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಾಯ ಮಾಡಿಕೊಂಡಿದ್ದಾರೆ. ತಕ್ಷಣ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದೆ ಎಂದು ಕಾರು ಚಾಲಕ ಎಸ್ ಮಹಮ್ಮದ್ ಅವರು ನೀಡಿದ ದೂರಿನಂತೆ ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment