ಉಪ್ಪಿನಂಗಡಿ ಕೀಟ ನಾಶಕ ಸೇವಿಸಿ ಬಾಲಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ಲೈಂಗಿಕ ಕಿರುಕುಳ ಆರೋಪದಡಿ ಇಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲು - Karavali Times ಉಪ್ಪಿನಂಗಡಿ ಕೀಟ ನಾಶಕ ಸೇವಿಸಿ ಬಾಲಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ಲೈಂಗಿಕ ಕಿರುಕುಳ ಆರೋಪದಡಿ ಇಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲು - Karavali Times

728x90

3 December 2025

ಉಪ್ಪಿನಂಗಡಿ ಕೀಟ ನಾಶಕ ಸೇವಿಸಿ ಬಾಲಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ಲೈಂಗಿಕ ಕಿರುಕುಳ ಆರೋಪದಡಿ ಇಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ, ಡಿಸೆಂಬರ್ 03, 2025 (ಕರಾವಳಿ ಟೈಮ್ಸ್) : ಕೀಟಕ ನಾಶಕ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟ ಘಟನೆಗೆ ಲೈಂಗಿಕ ಕಿರುಕುಳ ಕಾರಣ ಎಂದು ಬಾಲಕಿಯ ತಾಯಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 

ನವೆಂಬರ್ 11 ರಂದು ಬಾಲಕಿ ಮನೆಯಲ್ಲಿ ಕೀಟ ನಾಶಕ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದವಳು ನವೆಂಬರ್ 12 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. 

ಮೃತ ಬಾಲಕಿಯನ್ನು ಓರ್ವ ಆರೋಪಿಯು ಲೈಂಗಿಕವಾಗಿ ಬಳಸಿಕೊಂಡಿಕೊಂಡಿದ್ದು, ಮತ್ತೋರ್ವ ಆರೋಪಿಯೊಂದಿಗೆ ಸೇರಿ ಬಾಲಕಿಗೆ ಕಿರುಕುಳ ನೀಡಿ, ಬೆದರಿಸಿರುವುದರಿಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಬಾಲಕಿಯ ತಾಯಿ ನ 28 ರಂದು ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ನೀಡಿ ದೂರಿನಂತೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ, ಇಬ್ಬರು ಆರೋಪಿಗಳ ಪೈಕಿ ಪ್ರಮುಖ ಆರೋಪಿಯು ಅಪ್ರಾಪ್ತನೆಂದು ಕಂಡುಬಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಉಪ್ಪಿನಂಗಡಿ ಕೀಟ ನಾಶಕ ಸೇವಿಸಿ ಬಾಲಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ಲೈಂಗಿಕ ಕಿರುಕುಳ ಆರೋಪದಡಿ ಇಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲು Rating: 5 Reviewed By: karavali Times
Scroll to Top