ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಆರೋಪಿ : ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು - Karavali Times ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಆರೋಪಿ : ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು - Karavali Times

728x90

2 December 2025

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಆರೋಪಿ : ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ, ಡಿಸೆಂಬರ್ 03, 2025 (ಕರಾವಳಿ ಟೈಮ್ಸ್) : ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಯುವಕನ ವಿರುದ್ದ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 

ಆರೋಪಿಯನ್ನು ಮುಹಮ್ಮದ್ ಮುಸ್ತಫಾ (40) ಎಂದು ಹೆಸರಿಸಲಾಗಿದೆ. ಆರೋಪಿಯು ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಕಳೆದ ಎರಡು ತಿಂಗಳುಗಳಿಂದ ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದು, ಕಳೆದ ತಿಂಗಳ 29 ರಂದು ಆತನ ಮನೆಗೆ ಕರೆದಿರುತ್ತಾನೆ. ಈ ಬಗ್ಗೆ ಬಾಲಕಿ ತನ್ನ ಹೆತ್ತವರಿಗೆ ತಿಳಿಸಿದ್ದು, ಡಿ 2 ರಂದು ಆರೋಪಿಯ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ :114/2025, ಕಲಂ 11(1)(4),12 ಪೋಕ್ಸೋ ಹಾಗೂ 78 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. ಅರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಆರೋಪಿ : ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Rating: 5 Reviewed By: karavali Times
Scroll to Top