ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಅಭಿಯಾನ ಯಶಸ್ವಿಗೊಳಿಸಿ : ಎಂಎಲ್ಸಿ ಡಾ ಮಂಜುನಾಥ ಭಂಡಾರಿ ಕರೆ - Karavali Times ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಅಭಿಯಾನ ಯಶಸ್ವಿಗೊಳಿಸಿ : ಎಂಎಲ್ಸಿ ಡಾ ಮಂಜುನಾಥ ಭಂಡಾರಿ ಕರೆ - Karavali Times

728x90

21 December 2025

ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಅಭಿಯಾನ ಯಶಸ್ವಿಗೊಳಿಸಿ : ಎಂಎಲ್ಸಿ ಡಾ ಮಂಜುನಾಥ ಭಂಡಾರಿ ಕರೆ

ಮಂಗಳೂರು, ಡಿಸೆಂಬರ್ 21, 2025 (ಕರಾವಳಿ ಟೈಮ್ಸ್) : ಪ್ರತಿಯೊಬ್ಬರೂ ಕಡ್ಡಾಯವಾಗಿ ಜಿಲ್ಲೆಯಲ್ಲಿನ ಒಂದು ವರ್ಷದಿಂದ 5  ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಕೊಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಢಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಜಿಲ್ಲಾಡಳಿತ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭಾನುವಾರ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮತನಾಡಿದ ಅವರು, ಮಕ್ಕಳಿಗೆ ಪಲ್ಸ್  ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಶಾಶ್ವತವಾಗಿ ಅಂಗ ವೈಪಲ್ಯಯತೆಯಿಂದ ಮುಕ್ತ ಮಾಡಬಹುದು. ಮುಂದೆ ಯಾವುದೇ ರೀತಿಯ ಅಂಗ ವೈಫಲ್ಯತೆ ಮಕ್ಕಳಿಗೆ ಕಾಡದಿರಲು ಸರ್ಕಾರದೊಂದಿಗೆ ಕೈ ಜೋಡಿಸಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಬೇಕು. ಕೂಡಲೇ  ಅಭಿಯಾನದಲ್ಲಿ ಮಕ್ಕಳಿಗೆ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು. 

ಈ ಸಂದರ್ಭ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಬಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಆರ್.ಎಂ.ಓ. ಡಾ. ಜಗದೀಶ್, ರೆಡ್ ಕ್ರಾಸ್ ಅಧ್ಯಕ್ಷ ಶಾಂತರಾಮ ಶೆಟ್ಟಿ, ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್, ನೋಡಲ್ ಅಧಿಕಾರಿ ಡಾ. ಮಮತಾ ಮೊದಲಾದವರು ಭಾಗವಹಿಸಿದ್ದರು. 

ಡಿಸೆಂಬರ್ 21 ರಿಂದ 24 ರವರೆಗೆ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 3 ದಿನಗಳ ಕಾಲ ಹಾಗೂ ನಗರ ಪ್ರದೇಶದಲ್ಲಿ 4 ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ.

  • Blogger Comments
  • Facebook Comments

0 comments:

Post a Comment

Item Reviewed: ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಅಭಿಯಾನ ಯಶಸ್ವಿಗೊಳಿಸಿ : ಎಂಎಲ್ಸಿ ಡಾ ಮಂಜುನಾಥ ಭಂಡಾರಿ ಕರೆ Rating: 5 Reviewed By: karavali Times
Scroll to Top