ಬಂಟ್ವಾಳ, ಡಿಸೆಂಬರ್ 10, 2025 (ಕರಾವಳಿ ಟೈಮ್ಸ್) : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಪುದು ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಆರ್ ಪಿ ಎಲ್ ತರಬೇತಿ ಪ್ರಮಾಣ ಪತ್ರ ಮತ್ತು ಕಿಟ್ ವಿತರಣಾ ಕಾರ್ಯಕ್ರಮ ಡಿಸೆಂಬರ್ 10 ರಂದು ಪುದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ ಮಾತನಾಡಿ, ಕಾರ್ಮಿಕರಾಗಿ ದುಡಿಯುವ ವರ್ಗಕ್ಕೆ ಸರಕಾರ ಉತ್ತಮ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಈ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡು ಕಾರ್ಮಿಕ ಸಮುದಾಯ ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ನೈಜ ಕಾರ್ಮಿಕರಿಗೆ ಸರಕಾರ ಯಾವುದೇ ರೀತಿಯಲ್ಲೂ ಅನ್ಯಾಯ ಮಾಡದೆ ಸಕಲ ಸೌಲಭ್ಯಗಳನ್ನು ಕಾಲ ಕಾಲಕ್ಕೂ ನೀಡುತ್ತಾ ಬರುತ್ತದೆ. ಪುದು ಗ್ರಾ ಪಂ ಸಲಹೆ ಮೇರೆಗೆ ಕಾರ್ಮಿಕ ಇಲಾಖೆ ಈ ದಿನ ಪಂಚಾಯತ್ ಸಭಾಂಗಣದಲ್ಲೇ ತರಬೇತಿ, ಸವಲತ್ತು ವಿತರಣೆ ಹಾಗೂ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡು ಗ್ರಾಮದ ಕಾರ್ಮಿಕರಿಗೆ ಸಹಕಾರಿಯಾಗಿದೆ. ಮುಂದೆಯೂ ಕಾರ್ಮಿಕರಿಗಾಗಿ ಹಮ್ಮಿಕೊಳ್ಳುವ ಎಲ್ಲ ಕಾರ್ಯಕ್ರಮಗಳಿಗೂ ಪುದು ಪಂಚಾಯತ್ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ರುಕ್ಸಾನ ಬಾನು ಅಮೆಮಾರ್, ಪಂಚಾಯತ್ ಪಿಡಿಒ ಡಾ ಸ್ಮೃತಿ ಯು, ಪಂಚಾಯತ್ ಸದಸ್ಯರಾದ ಇಕ್ಬಾಲ್ ಸುಜೀರು, ಅಬ್ದುಲ್ ರಝಾಕ್ ಅಮೆಮಾರ್, ವಿಶು ಕುಮಾರ್, ಸಾರಮ್ಮ ಅಮೆಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಮಿಕ ಇಲಾಖೆಯ ಶ್ರೀಮತಿ ಫೆರ್ನಾಂಡಿಸ್ ಹಾಗೂ ಪ್ರತೀಕ್ ಪಂಡಿತ್, ಸುನಿಲ್‍ಕುಮಾರ್ ಸಿ ಕೆ ಸಿಂಗ್ ಭಾಗವಹಿಸಿದ್ದರು.

















0 comments:
Post a Comment