5 ವರ್ಷದೊಳಗಿನ ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕಾರ್ಯನಿರ್ವಹಿಸಿ : ಮನಪಾ ಆಯುಕ್ತ ರವಿಚಂದ್ರ ನಾಯಕ್ ಸೂಚನೆ - Karavali Times 5 ವರ್ಷದೊಳಗಿನ ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕಾರ್ಯನಿರ್ವಹಿಸಿ : ಮನಪಾ ಆಯುಕ್ತ ರವಿಚಂದ್ರ ನಾಯಕ್ ಸೂಚನೆ - Karavali Times

728x90

18 December 2025

5 ವರ್ಷದೊಳಗಿನ ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕಾರ್ಯನಿರ್ವಹಿಸಿ : ಮನಪಾ ಆಯುಕ್ತ ರವಿಚಂದ್ರ ನಾಯಕ್ ಸೂಚನೆ

ಮಂಗಳೂರು, ಡಿಸೆಂಬರ್ 19, 2025 (ಕರಾವಳಿ ಟೈಮ್ಸ್) : ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಡಿಸೆಂಬರ್ 21 ರಂದು ಪ್ರಾರಂಭವಾಗಲಿದ್ದು, ಜಿಲ್ಲೆಯ 5 ವರ್ಷದೊಳಗಿನ ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಮುತುವರ್ಜಿ ವಹಿಸಿ ಲಸಿಕೆ ಹಾಕಿಸಲು ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದ್ದಾರೆ.

ಮಹಾನಗರಪಾಲಿಕೆ ಮಂಗಳ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕಿಸಿದಾಗ ಪೋಲಿಯೋ ರೋಗ ನಿಯಂತ್ರಣ ಸಾಧ್ಯವಾಗುತ್ತದೆ. ಆದ್ದರಿಂದ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. 

ಲಸಿಕಾ ಕಾರ್ಯಕ್ರಮ ಆಯೋಜನೆಯ ಬಗ್ಗೆ ತಾಲೂಕು ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಚಾಲನಾ ಸಮಿತಿ ಸಭೆಯನ್ನು ನಡೆಸಿ ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು. ವಲಸೆ ಮಕ್ಕಳು, ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಕಾರ್ಖಾನೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ, ಅವರಿಗೆ  ಆದ್ಯತೆ ನೀಡಿ ಲಸಿಕೆ ಹಾಕಿಸಲು ಸಮರ್ಪಕ ವ್ಯವಸ್ಥೆ ಮಾಡಬೇಕು ಎಂದವರು ತಿಳಿಸಿದರು.

ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಪಲ್ಸ್ ಪೋಲಿಯೋ ಟ್ರಾನ್ಸಿಸಟ್ ಬೂತ್‍ಗಳನ್ನು ತೆರೆಯಲಾಗಿದೆ ಹಾಗೂ  ಮನೆ ಮನೆಗೆ ಭೇಟಿ ನೀಡಿ ಲಸಿಕೆ  ನೀಡುವ  ಲಸಿಕಾ  ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದ ಆಯುಕ್ತರು ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಕಾರ್ಮಿಕರಿಗೆ ಡೆಂಗ್ಯೂ ಮತ್ತು ಮಲೇರಿಯಾದ ಬಗ್ಗೆ ಮಾಹಿತಿ ಕೊರತೆ ಇರುತ್ತದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕಟ್ಟಡ ನಿರ್ಮಾಣ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಮಿಕರಿಗೆ ಡೆಂಗ್ಯೂ ಮತ್ತು ಮಲೇರಿಯಾದ ಕುರಿತು ತಿಳುವಳಿಕೆ ನೀಡಿ, ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: 5 ವರ್ಷದೊಳಗಿನ ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕಾರ್ಯನಿರ್ವಹಿಸಿ : ಮನಪಾ ಆಯುಕ್ತ ರವಿಚಂದ್ರ ನಾಯಕ್ ಸೂಚನೆ Rating: 5 Reviewed By: karavali Times
Scroll to Top