ಪುತ್ತೂರು, ಡಿಸೆಂಬರ್ 24, 2025 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 53/2025, ಕಲಂ 306 ಬಿ ಎನ್ ಎಸ್ ಪ್ರಕರಣದಲ್ಲಿ ಆರೋಪಿತನಾದ ಸುಳ್ಯ ತಾಲೂಕು ಐವರ್ನಾಡು ನಿವಾಸಿ ಶಿವಪ್ರಸಾದ್ (41) ಎಂಬಾತನಿಗೆ ಪುತ್ತೂರು ಎ.ಎಸ್.ಸಿ.ಜೆ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ದೇವರಾಜ್ ಅವರು ವಿಚಾರಣೆ ನಡೆಸಿ ಆರೋಪಿಗೆ 3 ವರ್ಷಗಳ ಸಾದಾ ಸಜೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ ಆರು ತಿಂಗಳ ಸದಾ ಕಾರವಾಸ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸದ್ರಿ ಪ್ರಕರಣದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಸೈ ಸುಷ್ಮ ಭಂಡಾರಿ ಅವರು ಪ್ರಕರಣದ ವಿಚಾರಣೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ತ್ವರಿತವಾಗಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಮತಿ ಚೇತನಾ ದೇವಿ ಅವರು ವಾದ ಮಂಡಿಸಿದ್ದಾರೆ.



















0 comments:
Post a Comment