ಮಂಗಳೂರು : ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನೌಕರರ ಒಕ್ಕೂಟದ ಕ್ರೀಡಾಕೂಟ - Karavali Times ಮಂಗಳೂರು : ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನೌಕರರ ಒಕ್ಕೂಟದ ಕ್ರೀಡಾಕೂಟ - Karavali Times

728x90

27 December 2025

ಮಂಗಳೂರು : ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನೌಕರರ ಒಕ್ಕೂಟದ ಕ್ರೀಡಾಕೂಟ

ಮಂಗಳೂರು, ಡಿಸೆಂಬರ್ 27, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ ಮಂಗಳೂರು ಇದರ ಕ್ರೀಡಾಕೂಟವು ಡಿ 27 ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು. 

ಕಾರ್ಯಕ್ರಮ ಉದ್ಘಾಟಿಸಿದ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಮಾತನಾಡಿ, ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ನೌಕರರಿಗಾಗಿ ಕ್ರೀಡಾಕೂಟ ಏರ್ಪಡಿಸಿ ಅವರಲ್ಲಿ ಹುಮ್ಮಸ್ಸು ತುಂಬುವ ಕಾರ್ಯಕ್ರಮ ಶ್ಲಾಘನೀಯವಾದುದು. ಸದಾಕಾಲ ಕೆಲಸದ ಒತ್ತಡದಲ್ಲಿ ಇರುವ ನೌಕರರು ಜಂಜಾಟವನ್ನು ಮರೆತು ಸೌಹಾರ್ದಯುತವಾಗಿ ಕೂಟದಲ್ಲಿ ಪಾಲ್ಗೊಳ್ಳಬೇಕು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹ ನಿರ್ದೇಶಕ ಪ್ರದೀಪ್ ಡಿಸೋಜ ಮಾತಾಡಿ, ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರು ಸಹಕಾರಿ ಕ್ಷೇತ್ರದಷ್ಟೇ ಕ್ರೀಡಾ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಾ ಬಂದವರು. ನೌಕರರು ಒಂದಾಗಿ ಒಂದೆಡೆ ಬೆರೆತು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಸಂತೋಷದ ವಿಚಾರ ಎಂದರು. 

ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ದೇವರಾಜ್ ರೈ, ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಳ್ಯೊಟ್ಟು, ಒಕ್ಕೂಟದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಜೋಯಿಲ್ ಪ್ರಕಾಶ್ ಡಿಸೋಜ ಮೊದಲಾದವರು ಭಾಗವಹಿಸಿದ್ದರು. ಇದೇ ವೇಳೆ ಬ್ಯಾಂಕ್ ಅಧ್ಯಕ್ಷರನ್ನು ನೌಕರರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಗೆದ್ದ ಒಕ್ಕೂಟದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಒಕ್ಕೂಟದ ಅಧ್ಯಕ್ಷ ಕರುಣಾಕರ ಸ್ವಾಗತಿಸಿ, ಪ್ರಸ್ತಾವನೆಗೈದರು. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು : ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನೌಕರರ ಒಕ್ಕೂಟದ ಕ್ರೀಡಾಕೂಟ Rating: 5 Reviewed By: karavali Times
Scroll to Top