ಬಂಟ್ವಾಳ, ಡಿಸೆಂಬರ್ 24, 2025 (ಕರಾವಳಿ ಟೈಮ್ಸ್) : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಲೋತ್ಸವ-2025 ಡಿಸೆಂಬರ್ 23ರಂದು ಮಾಣಿ ಬಾಲವಿಕಾಸ ಆಡಿಟೋರಿಯಂನಲ್ಲಿ ನಡೆಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ, ಬಾಲವಿಕಾಸ ಟ್ರಸ್ಟ್ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ಭುವನೇಶ್ ಉದ್ಘಾಟಿಸಿದರು.
ಬಂಟ್ವಾಳ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ, ಪ್ರತಿಭಾ ಕಲೋತ್ಸವ ಸಮಿತಿ ಸಂಚಾಲಕ ಬದಿಗುಡ್ಡೆ ಜಗನ್ನಾಥ ಚೌಟ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕಿರಣ್ ಕುಮಾರ್, ಗೈಡ್ಸ್ ವಿಭಾಗದ ಜಿಲ್ಲಾ ಆಯುಕ್ತೆ ಶ್ರೀಮತಿ ವಿಮಲ ರಂಗಯ್ಯ, ಜಿಲ್ಲಾ ತರಬೇತಿ ಆಯುಕ್ತ ಶಾಂತಾರಾಮ ಪ್ರಭು, ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಜಯವಂತಿ ಸೋನ್ಸ್, ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಸುಪ್ರಿಯಾ ದೇವರಮಜಲು, ಮಾಣಿ ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಇಬ್ರಾಹಿಂ, ಕಾರ್ಯದರ್ಶಿ ಸದಾನಂದ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಆಯುಕ್ತ ಪಿಜಿಆರ್ ಸಿಂಧ್ಯ ಕಾರ್ಯಕ್ರಮಕ್ಕೆ ಅನಿರೀಕ್ಷಿತ ಭೇಟಿ ನೀಡಿ ಬಾಲವಿಕಾಸ ಶಾಲೆಯು ಅಳವಡಿಸಿಕೊಂಡ ತಂತ್ರಜ್ಞಾನದ ಬಗ್ಗೆ ಶ್ಲಾಘಿಸಿದರು. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅಳವಡಿಸಿಕೊಂಡ ಆರ್ ಎಫ್ ಐ ಡಿ ಗೇಟ್, ಕಲೋತ್ಸವದ ವಿಜೇತ ವಿದ್ಯಾರ್ಥಿಗಳಿಗೆ ನೀಡಿದ ಸ್ಕೌಟ್ಸ್-ಗೈಡ್ ಲೋಗೋ ಆಕಾರದ ಅಚ್ಚಿನ ಪದಕಗಳು, ಸ್ಪರ್ಧಾ ವಿಜೇತರ ಭಾವಚಿತ್ರ ಸಮೇತವಾಗಿ ಮುದ್ರಣಗೊಳ್ಳುತ್ತಿದ್ದ ಪ್ರಶಸ್ತಿ ಪತ್ರಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಸಿಂಧ್ಯ ಅವರನ್ನು ಬಾಲವಿಕಾಸ ವಿದ್ಯಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಶ್ಯಾಮಲಾ ಸ್ವಾಗತಿಸಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಪ್ರಸ್ತಾವನೆಗೈದರು. ಜಿಲ್ಲಾ ತರಬೇತಿ ಆಯುಕ್ತ ಪ್ರತೀಮ್ ಕುಮಾರ್ ವಂದಿಸಿದರು. ಮಾಣಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಂದ 1200 ಕಬ್ಸ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಒಟ್ಟು 56 ಸ್ಪರ್ಧೆಗಳಿಗೆ ವಿವಿಧ ರಂಗಗಳಲ್ಲಿ ಪರಿಣಿತಿ ಪಡೆದ 36 ಅರ್ಹ ತೀರ್ಪುಗಾರರನ್ನು ಆಹ್ವಾನಿಸಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಅಧಿಕ ಅಂಕಗಳನ್ನು ಗಳಿಸಿದ್ದ ಶಾಲೆಗಳಿಗೆ ವಿಭಾಗವಾರು ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.





















0 comments:
Post a Comment