ಅಮ್ಮುಂಜೆ : ನರ ಸಮಸ್ಯೆ, ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನೆಯಲ್ಲೇ ನೇಣಿಗೆ ಶರಣು - Karavali Times ಅಮ್ಮುಂಜೆ : ನರ ಸಮಸ್ಯೆ, ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನೆಯಲ್ಲೇ ನೇಣಿಗೆ ಶರಣು - Karavali Times

728x90

2 December 2025

ಅಮ್ಮುಂಜೆ : ನರ ಸಮಸ್ಯೆ, ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನೆಯಲ್ಲೇ ನೇಣಿಗೆ ಶರಣು

ಬಂಟ್ವಾಳ, ಡಿಸೆಂಬರ್ 02, 2025 (ಕರಾವಳಿ ಟೈಮ್ಸ್) : ನರದ ಸಮಸ್ಯೆ ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮ್ಮುಂಜೆ ಗ್ರಾಮದ ಲಾಡಿ ಎಂಬಲ್ಲಿ ಡಿ 1 ರಂದು ಸಂಭವಿಸಿದೆ. 

ಮೃತರನ್ನು ಮೊಹಮ್ಮದ್ ಹನೀಫ್ ಎಂದು ಹೆಸರಿಸಲಾಗಿದೆ. ಇವರು ನರದ ಸಮಸ್ಯೆ ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ 30 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಬಂದು ಮನೆಯಲ್ಲಿ ಮಲಗಿದ್ದರು. ಡಿ 1 ರಂದು ಬೆಳಿಗ್ಗೆ ಬಾತ್ ರೂಮಿಗೆ ಹೋಗಿ ಬರುತ್ತೇನೆ ಎಂದು ಹೋದವರು ವಯರಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈ ಬಗ್ಗೆ ಮೃತರ ಪತ್ನಿ ಉಮೈಬಾನು ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಅಮ್ಮುಂಜೆ : ನರ ಸಮಸ್ಯೆ, ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನೆಯಲ್ಲೇ ನೇಣಿಗೆ ಶರಣು Rating: 5 Reviewed By: karavali Times
Scroll to Top