ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿ ಸರಕಾರ ಆದೇಶ - Karavali Times ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿ ಸರಕಾರ ಆದೇಶ - Karavali Times

728x90

24 December 2025

ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿ ಸರಕಾರ ಆದೇಶ

ಮಂಗಳೂರು, ಡಿಸೆಂಬರ್ 24, 2025 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಸುಮಾರು ಮೂರು ಕೋಟಿಯಷ್ಟು ವಿವಿಧ ರೀತಿಯ ಕಾರ್ಮಿಕರಿರುವ “ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ” ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್ ಅವರಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶಿಸಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ  ಕಾರ್ಮಿಕರ ಬಗ್ಗೆ ಇರುವ ವಿಶೇಷ ಕಾಳಜಿ ಮತ್ತು ಕಾರ್ಮಿಕರ ಕನಿಷ್ಠ ವೇತನದ ಸಮಸ್ಯೆ ಬಗ್ಗೆ ಚರ್ಚಿಸಲು, ಬಗೆಹರಿಸಲು ಇತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಕಾರ್ಮಿಕ ಕನಿಷ್ಠ ವೇತನದ ಬಗ್ಗೆ ಅಧ್ಯಯನ ಮಾಡಲು ಹಾಗಗೂ ಕೇಂದ್ರ ಸರಕಾರದ ಜಾರಿಗೆ ತಂದ ನೂತನ ಕಾರ್ಮಿಕ ಸಂಹಿತೆ ಮೊದಲಾದ ಅಂಶಗಳನ್ನು ಪರಿಗಣಿಸಿ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಲಾಗಿದೆ ಎನ್ನಲಾಗಿದೆ. 

ಶಹೀದ್ ಅವರು ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್  ಸದಸ್ಯರಾಗಿ, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ಸರಕಾರದ ನಾರು ಮಂಡಳಿ ಸದಸ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿ ಸರಕಾರ ಆದೇಶ Rating: 5 Reviewed By: karavali Times
Scroll to Top