ಜೇನು ಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಆರೋಪಿ ಬಂಧನ - Karavali Times ಜೇನು ಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಆರೋಪಿ ಬಂಧನ - Karavali Times

728x90

21 December 2025

ಜೇನು ಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಆರೋಪಿ ಬಂಧನ

ಉಪ್ಪಿನಂಗಡಿ, ಡಿಸೆಂಬರ್ 21, 2025 (ಕರಾವಳಿ ಟೈಮ್ಸ್) : ಜೇನು ಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರಗೈದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಅಬ್ದುಲ್ ಗಫೂರ್ ಎಂದು ಹೆಸರಿಸಲಾಗಿದೆ. ಬೆಳಗಾವಿ ಮೂಲದ ಮಹಿಳೆಯು ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುತ್ತಾರೆ. ಪ್ರಕರಣದ ಆರೋಪಿ ಅಬ್ದುಲ್ ಗಫೂರ್ ಎಂಬಾತನು ಮಹಿಳೆಯ ಅಪ್ರಾಪ್ತ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ ಮಹಿಳೆ ತನ್ನ ಮಗಳನ್ನು 2 ತಿಂಗಳಿಂದ ಆರೋಪಿಯ ಮನೆಯಲ್ಲಿ ಬಿಟ್ಟಿರುತ್ತಾರೆ. ನೊಂದ ಬಾಲಕಿಯ ಹೆತ್ತವರು ಊರಿಗೆ ತೆರಳಿದ್ದವರು ಡಿಸೆಂಬರ್ 19 ರಂದು ಹಿಂತಿರುಗಿ ಬಂದಾಗ,   ಬಾಲಕಿ ಅಳುತ್ತಾ ಬಂದು ಡಿ 2 ರಿಂದ ಆರೋಪಿಯು ಆಕೆಯನ್ನು ನಿರಂತರವಾಗಿ ಅತ್ಯಾಚಾರ ಮಾಡಿರುವುದಾಗಿ ಬಾಲಕಿ ತಿಳಿಸಿರುತ್ತಾಳೆ ಎಂಬುದಾಗಿ ನೀಡಿದ ದೂರಿನಂತೆ ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025, ಕಲಂ  115(2), 351(2), 65(1) ಬಿ ಎನ್ ಎಸ್-2023, 4,6 ಪೆÇೀಕ್ಸೋ ಕಾಯ್ದೆ 2012 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿರುತ್ತದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಜೇನು ಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಆರೋಪಿ ಬಂಧನ Rating: 5 Reviewed By: karavali Times
Scroll to Top