ಜಿಲ್ಲಾ ಘಟಕ ಪೂರ್ಣ ನೇತೃತ್ವ ವಹಿಸಿ ಮಾರ್ಗದರ್ಶನ ನೀಡಿದರೆ ಬಂಟ್ವಾಳದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು : ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ - Karavali Times ಜಿಲ್ಲಾ ಘಟಕ ಪೂರ್ಣ ನೇತೃತ್ವ ವಹಿಸಿ ಮಾರ್ಗದರ್ಶನ ನೀಡಿದರೆ ಬಂಟ್ವಾಳದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು : ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ - Karavali Times

728x90

25 December 2025

ಜಿಲ್ಲಾ ಘಟಕ ಪೂರ್ಣ ನೇತೃತ್ವ ವಹಿಸಿ ಮಾರ್ಗದರ್ಶನ ನೀಡಿದರೆ ಬಂಟ್ವಾಳದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು : ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ

ಬಂಟ್ವಾಳದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಪೂರ್ವಭಾವಿ ಸಭೆ


ಬಂಟ್ವಾಳ, ಡಿಸೆಂಬರ್ 25, 2025 (ಕರಾವಳಿ ಟೈಮ್ಸ್) : ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಬಂಟ್ವಾಳದಲ್ಲಿ ನಡೆಸುವ ಕುರಿತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರೊಂದಿಗೆ ಸಮಾಲೋಚನಾ ಸಭೆ ಡಿ 24 ರಂದು ಸಂಜೆ ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ ಎಂಪಿ ಶ್ರೀನಾಥ್ ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ಈ ಹಿಂದೆ ನಡೆದ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ಅಭಿಮಾನಿಗಳು ತೊಡಗಿಸಿಕೊಂಡ ರೀತಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಸಲು ಪ್ರೇರಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ಬಂಟ್ವಾಳದ ಆತಿಥ್ಯದಲ್ಲಿ ಸಮ್ಮೇಳನ ನಡೆಸುವುದಾದರೆ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಪರಿಷತ್ ಮಾಜಿ ಅಧ್ಯಕ್ಷ ಎಸ್ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ಇಂದು ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುವ ವೇಳೆ ಸಿದ್ಧ ಸೂತ್ರಗಳನ್ನು ಬದಿಗಿರಿಸಿ, ಆಸಕ್ತರಲ್ಲಿ ಸಾಹಿತ್ಯ ಪ್ರಜ್ಞೆಯನ್ನು ಬೆಳೆಸುವ ಹಾಗೂ ಕನ್ನಡ ಮತ್ತು ತುಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಂಥನಗಳು ಸಮ್ಮೇಳನದಲ್ಲಾಗಬೇಕಿದೆ ಎಂದರು. 

ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಂಪೂರ್ಣವಾಗಿ ನೇತೃತ್ವವನ್ನು ವಹಿಸಿಕೊಂಡು ಮಾರ್ಗದರ್ಶನ ನೀಡಬೇಕಾಗಿದೆ ಎಂದರು.

ಈ ಸಂದರ್ಭ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ, ಸದಸ್ಯ ಪೂವಪ್ಪ ನೇರಳಕಟ್ಟೆ, ಪುತ್ತೂರು ತಾಲೂಕು ಅಧ್ಯಕ್ಷ ಉಮೇಶ್ ನಾಯಕ್, ಬಂಟ್ವಾಳ ತಾಲೂಕಿನ ಗೌರವ ಪ್ರಧಾನ ಕಾರ್ಯದರ್ಶಿಗಳಾದ ವಿ ಸು ಭಟ್, ರಮಾನಂದ ನೂಜಿಪ್ಪಾಡಿ, ಕೋಶಾಧಿಕಾರಿ ಡಿ ಬಿ ಅಬ್ದುಲ್ ರಹಿಮಾನ್, ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಪಿ ಮುಹಮ್ಮದ್, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ್ ಪಾಂಡೇಲು, ಬಂಟ್ವಾಳ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಪದಾಧಿಕಾರಿಗಳಾದ ರವೀಂದ್ರ ಕುಕ್ಕಾಜೆ, ಸುಭಾಶ್ಚಂದ್ರ ಜೈನ್, ಹರೀಶ ಮಾಂಬಾಡಿ, ಲತೀಫ್ ನೇರಳಕಟ್ಟೆ, ಸಲೀಂ ಬೋಳಂಗಡಿ, ಅಬೂಬಕರ್ ಅಮ್ಮುಂಜೆ, ರಜನಿ ಚಿಕ್ಕಯ್ಯಮಠ, ಪ್ರಮುಖರಾದ ಸನ್ಮತಿ ಜೈನ್, ಕೃಷ್ಣ ಭಟ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲಾ ಘಟಕ ಪೂರ್ಣ ನೇತೃತ್ವ ವಹಿಸಿ ಮಾರ್ಗದರ್ಶನ ನೀಡಿದರೆ ಬಂಟ್ವಾಳದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು : ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ Rating: 5 Reviewed By: karavali Times
Scroll to Top