ಮಂಗಳೂರು, ಡಿಸೆಂಬರ್ 14, 2025 (ಕರಾವಳಿ ಟೈಮ್ಸ್) : ಸೌದಿ ಅರೇಬಿಯಾದಲ್ಲಿ ಕುಳಿತು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮಿನಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೆÇೀಸ್ಟ್ ಹಾಕಿದ ಪ್ರಕರಣದ ಆರೋಪಿ ದೇಶಕ್ಕೆ ಬರುತ್ತಿದ್ದಂತೆ ಬಜಪೆ ಪೆÇಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ಮಂಗಳೂರು ತಾಲೂಕು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನಿವಾಸಿ, ಪ್ರಸ್ತುತ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಅಂಚೆ ವ್ಯಾಪ್ತಿಯ, ಸಜಿಪಮುನ್ನೂರು ಗ್ರಾಮದಲ್ಲಿ ವಾಸ್ತವ್ಯ ಹೊಂದಿರುವ ಅಬ್ದುಲ್ ಖಾದರ್ ನೇಹಾದ್ (27) ಎಂದು ಹೆಸರಿಸಲಾಗಿದೆ.
ಅಕ್ಟೋಬರ್ 11 ರಂದು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮಿನಲ್ಲಿ ಎಸ್ ಡಿ ಪಿ ಐ_ಐಡಿ ಎಂಬ ಖಾತೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೆÇೀಸ್ಟ್ ಹಾಕಿದ ಬಗ್ಗೆ ಬಜಪೆ ಪೆÇಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ತಾಂತ್ರಿಕ ವಿಧಾನದ ಮೂಲಕ ತನಿಖೆ ನಡೆಸಿದಾಗ ಪೆÇೀಸ್ಟ್ ಹಾಕಿದ ವ್ಯಕ್ತಿ ಮಂಗಳೂರು ಮೂಲದ ಸೌದಿ ಅರೆಬಿಯಾದಲ್ಲಿರುವ ಅಬ್ದುಲ್ ಖಾದರ್ ನೇಹಾದ್ ಎಂದು ತಿಳಿದುಬಂದಿರುತ್ತದೆ.
ಆರೋಪಿ ಅಬ್ದುಲ್ ಖಾದರ್ ನೇಹಾದ್ ವಿರುದ್ಧ ಎಲ್ ಒ ಸಿ ಹೊರಡಿಸಲಾಗಿರುತ್ತದೆ. ಡಿ. 14 ರಂದು ಕೇರಳ ರಾಜ್ಯದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಪ್ರಯಾಣ ಮಾಡಿ ಬಂದಿದ್ದ ಆರೋಪಿ ಅಬ್ದುಲ್ ಖಾದರ್ ನೇಹಾದ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.














0 comments:
Post a Comment