ಮಂಗಳೂರು, ಡಿಸೆಂಬರ್ 19, 2025 (ಕರಾವಳಿ ಟೈಮ್ಸ್) : ಇನ್ಸ್ಟಾಗ್ರಾಮ್ ಪೇಜಿನಲ್ಲಿ ಬಜ್ಪೆ ಠಾಣಾ ಪೊಲೀಸರ ವಿರುದ್ದ ಪ್ರಚೋದನಕಾರಿ ಸಂದೇಶ ಹರಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ,
ಬಂಧಿತ ಆರೋಪಿಯನ್ನು ಮಂಗಳೂರು-ಕಾಟಿಪಳ್ಳ ನಿವಾಸಿ ಮುರಳೀಧರ ಎಂಬವರ ಪುತ್ರ ಅಭಿಷೇಕ್ ಎಂ (23) ಎಂದು ಹೆಸರಿಸಲಾಗಿದೆ.
mr_a_titude ಎಂಬ ಇನ್ಸ್ಟಾಗ್ರಾಮ್ ಪೇಜ್ ಮುಖಾಂತರ ಹೋಟೆಲ್ ನಿಸರ್ಗ ಎಂಬ ಫೋಟೋವನ್ನು ಹಾಕಿ ಅದರ ಮೇಲೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರಿಂದ ರಾಜ ಅತಿಥ್ಯ, ದಿನಾಲೂ ಬಜ್ಪೆ ನಿಸರ್ಗ ಹೋಟೆಲಿಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ...... ಜನರನ್ನು ರಕ್ಷಣೆ ಮಾಡಬೇಕಾದ ಪೆÇಲೀಸ್ ಇಲಾಖೆ ಅಪರಾಧಿಗಳೊಟ್ಟಿಗೆ ಸೇರಿಕೊಂಡು ಪೂರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಇಲ್ಲಿ ಪೊಲೀಸ್ ನವರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ ಎಂಬುದಾಗಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮೇ 8 ರಂದು ಮಂಗಳೂರು ನಗರದ ಬಜಪೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರದ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೈಗೊಳ್ಳಲಾಗಿರುತ್ತದೆ.
ಸದ್ರಿ ಆರೋಪಿತನ ವಿರುದ್ದ ಈ ಹಿಂದೆ ಕೊಲೆ, ಕೊಲೆಯತ್ನ, ಹಲ್ಲೆ, ದರೋಡೆ ಸೇರಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 3, ಕಾಪು ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣಗಳು ಸಹ ದಾಖಲಾಗಿರುತ್ತದೆ. ಸುರತ್ಕಲ್ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 11/2021 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 137/2021 ಹಲ್ಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 62/2022 ಕೊಲೆ ಪ್ರಕರಣ ಹಾಗೂ ಕಾಪು ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 62/2024 ದರೋಡೆ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ mr_a_titude ಎಂಬ ಇನ್ಸ್ಟಾಗ್ರಾಮ್ ಪೇಜಿನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದ ಆರೋಪಿತನನ್ನು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ದಸ್ತಗಿರಿ ಕ್ರಮ ಜರುಗಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ.














0 comments:
Post a Comment