ಪ್ರಕರಣಗಳ ರಾಜೀ ಸಂಧಾನ : 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ - Karavali Times ಪ್ರಕರಣಗಳ ರಾಜೀ ಸಂಧಾನ : 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ - Karavali Times

728x90

20 January 2026

ಪ್ರಕರಣಗಳ ರಾಜೀ ಸಂಧಾನ : 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ

ಮಂಗಳೂರು, ಜನವರಿ 21, 2026 (ಕರಾವಳಿ ಟೈಮ್ಸ್) : “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 2.0 ಎಂಬ 90 ದಿನಗಳ 2ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಜನವರಿ 2 ರಿಂದ ನಡೆಯಲಿದ್ದು, ಇದರ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದÀ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದೆ. 

ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ದಕ್ಷಿಣ ಕನ್ನಡ ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಲ್ಲಿ ನುರಿತ ಸಂಧಾನಕಾರರು ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಾರೆ. ಪ್ರಕರಣಗಳು ಹೈಕೋರ್ಟ್ ನಲ್ಲಿ ಬಾಕಿ ಇದ್ದಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಆವರಣಗಳಲ್ಲಿರುವ  ಹೈಕೋರ್ಟ್ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. 

ಉಚಿತ ಕಾನೂನು ಸಲಹೆಗಾಗಿ 15100 ಸಂಖ್ಯೆಗೆ ಕರೆ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪ್ರಕರಣಗಳ ರಾಜೀ ಸಂಧಾನ : 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ Rating: 5 Reviewed By: karavali Times
Scroll to Top