ಬಂಟ್ವಾಳ, ಜನವರಿ 15, 2026 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ರಿ ಬಂಟ್ವಾಳ ತಾಲೂಕು ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ 1001 ನೇ ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಬಂಟ್ವಾಳ ಉನ್ನತಿ ಸೌಧ ಸಭಾ ಭವನದಲ್ಲಿ ಇತ್ತೀಚೆಗೆ ನಡೆಯಿತು.
ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪೂಜಾರಿ, ಕೇಂದ್ರ ಒಕ್ಕೂಟ ಅಧ್ಯಕ್ಷ ಚಿದಾನಂದ ರೈ, ಮಾಜಿ ಅಧ್ಯಕ್ಷರುಗಳಾದ ಸದಾನಂದ ನಾವೂರು, ಕೃಷ್ಣಪ್ಪ ಪೂಜಾರಿ, ಮಾಧವ ವಳವೂರು ಹಾಗೂ ಎಲ್ಲಾ 68 ಒಕ್ಕೂಟಗಳ ಅಧ್ಯಕ್ಷರುಗಳು, ವಲಯಾಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.
















0 comments:
Post a Comment