ಬೆಳ್ತಂಗಡಿ, ಜನವರಿ 15, 2026 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಮನೆ ಸಮೀಪದ ತೋಟದಲ್ಲಿನ ಕೆರೆಯಲ್ಲಿ ಶವವಾಗಿ ಪತ್ತೆಯಾದ ಬಾಲಕ ಸುಮಂತ್ (15) ಎಂಬಾತನ ಮರಣೋತ್ತರ ಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ತಿಳಿಸಿದೆ.
ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ ಉಂಟಾಗಿವೆ ಮತ್ತು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದು ಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿ ಎಸ್ ಪಿ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.














0 comments:
Post a Comment