ಮಂಗಳೂರು, ಜನವರಿ 08, 2026 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ 10 ರಂದು ಸಂಜೆ 5 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ 5.30ಕ್ಕೆ ಅತ್ತಾವರ ಹೋಟೆಲ್ ಅವತಾರ್ ನಲ್ಲಿ ನಡೆಯುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7 ಗಂಟೆಗೆ ಪಿಲಿಕುಳದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಿದ ಪಿಲಿಕುಳ ರೆಸಾರ್ಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ ನಗರದಲ್ಲಿ ವಾಸ್ತವ್ಯ ಹೊಂದಿ ಜನವರಿ 11 ರಂದು ಬೆಳಿಗ್ಗೆ 11.10ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಕೃಷಿ ಸಚಿವರ ಪ್ರವಾಸ : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 9.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 10.30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಗದ್ದೆಯಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ನಡೆಯುವ ಮೈಸೂರು ವಿಭಾಗ ಮಟ್ಟದ ಕೃಷಿ ಹಾಗೂ ಸಸ್ಯ ಮೇಳ ಜಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.15ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು.
ಅರಣ್ಯ ಸಚಿವರ ಪ್ರವಾಸ : ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಜನವರಿ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ 9 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸುವ ಸಚಿವರು, 10 ಗಂಟೆಗೆ ಕದ್ರಿ ಉದ್ಯಾನವನದ ಹತ್ತಿರ ಹೊಸದಾಗಿ ನಿರ್ಮಾಣವಾಗಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವಿಭಾಗ ಕಚೇರಿ ಮತ್ತು ಇತರೆ ಇಲಾಖೆ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11 ಗಂಟೆಗೆ ಲಾಲ್ ಬಾಗ್ ನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ವಸತಿ ಗೃಹದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11.30ಕ್ಕೆ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಕಚೇರಿ ಭೇಟಿ, ಮಧ್ಯಾಹ್ನ 1 ಗಂಟೆಗೆ ಪಿಲಿಕುಳ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ 12ನೇ ಕರ್ನಾಟಕ ಹಕ್ಕಿ ಹಬ್ಬದಲ್ಲಿ ಭಾಗವಹಿಸುವರು. 2 ಗಂಟೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಮರ್ಶನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಮಂಗಳೂರಿನ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಚಿವರು ಸಂಜೆ 6.30ಕ್ಕೆ ಗುರುಪುರ ಮಠಕ್ಕೆ ಭೇಟಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಪರಿಷ್ಕøತ ಪ್ರವಾಸ : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 9 ರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 9 ರಂದು ಬೆಳಿಗ್ಗೆ 9.5ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 9.30ಕ್ಕೆ ನಗರದ ಕದ್ರಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ನೂತನ ಕಚೇರಿಯ ಉದ್ಘಾಟನಾ ಸಮಾರಂಭ, 10 ಗಂಟೆಗೆ ಲಾಲ್ ಬಾಗ್ ಕರಾವಳಿ ಮೈದಾನದ ಎದುರು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸತಿಗೃಹ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. 11 ಗಂಟೆಗೆ ಪಿಲಿಕುಳ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಭವನದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಉದ್ಘಾಟನಾ ಕಾರ್ಯಕ್ರಮ, 2.45ಕ್ಕೆ ಪಡೀಲ್ ಪ್ರಜಾಸೌಧದಲ್ಲಿರುವ ಉಸ್ತುವಾರಿ ಸಚಿವರ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಸಂಜೆ 4 ಗಂಟೆಗೆ ಪ್ರಜಾಸೌಧದಲ್ಲಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಲೇಡಿಗೋಶನ್ ಆಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆಗಳ ಜೊತೆಗಿನ ಸಹಭಾಗಿತ್ವದ ಕುರಿತು ಸಭೆ, 5 ಗಂಟೆಗೆ ಪ್ರಜಾಸೌಧದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ, 6 ಗಂಟೆಗೆ ಪಿಲಿಕುಳದಲ್ಲಿ ಗಾಲ್ಫ್ ಕ್ಲಬ್ ಉದ್ಘಾಟನೆ.
ಜನವರಿ 10 ರಂದು ಬೆಳಿಗ್ಗೆ 9 ಗಂಟೆಗೆ ಪಡೀಲ್ ಪ್ರಜಾಸೌಧದಲ್ಲಿರುವ ಉಸ್ತುವಾರಿ ಸಚಿವರ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 5.30ಕ್ಕೆ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಚಿವರು, ರಾತ್ರಿ 7 ಗಂಟೆಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಿದ ಪಿಲಿಕುಳ ರೆಸಾರ್ಟ್ ಉದ್ಘಾಟನಾ ಸಮಾರಂಭಲ್ಲಿ ಪಾಲ್ಗೊಳ್ಳುವರು. 8.30ಕ್ಕೆ ನರಿಂಗಾನದಲ್ಲಿ 4ನೇ ಹೊನಲು ಬೆಳಕಿನ ಲವಕುಶ ಜೋಡು ಕರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ. ಜನವರಿ 11 ರಂದು ಬೆಳಿಗ್ಗೆ 6.15ಕ್ಕೆ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.




















0 comments:
Post a Comment