ಬಂಟ್ವಾಳ, ಜನವರಿ 09, 2026 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಡಿ 7 ರಂದು ಸಂಭವಿಸಿದೆ.
ಗಾಯಾಳು ದ್ವಿಚಕ್ರ ಸವಾರರನ್ನು ಕಡಬ ತಾಲೂಕು ಏನೆಕಲ್ಲು ಗ್ರಾಮದ ನಿವಾಸಿ, ಬೈಕ್ ಸವಾರ ಕೌಶಿಕ್ ಕೆ ಆರ್ (24) ಹಾಗೂ ಸಹಸವಾರ ಇವರ ದೊಡ್ಡಮ್ಮನ ಮಗ ಅಜಿತ್ ಎಂದು ಹೆಸರಿಸಲಾಗಿದೆ. ಕೌಶಿಕ್ ಅವರು ಬೈಕಿನಲ್ಲಿ ಅಜಿತ್ ಅವರನ್ನು ಕುಳ್ಳಿರಿಸಿಕೊಂಡು ಸಂಚರಿಸುತ್ತಿದ್ದ ವೇಳೆ ಕುದ್ರೆಬೆಟ್ಟು ಎಂಬಲ್ಲಿ ಕಲ್ಲಡ್ಕ ಜಂಕ್ಷನ್ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಮುಹಮ್ಮದ್ ಮುಸ್ತಾಫ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಘಟನೆಯಿಂದ ಬೈಕ್ ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರು ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















0 comments:
Post a Comment