ಮಂಗಳೂರು, ಜನವರಿ 09, 2026 (ಕರಾವಳಿ ಟೈಮ್ಸ್) : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜನವರಿ 10 ರಂದು (ನಾಳೆ) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 9.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಧ್ಯಾಹ್ನ 12 ಗಂಟೆಗೆ ಅತ್ತಾವರ ಅವತಾರ್ ಹೋಟೆಲಿನಲ್ಲಿ ನಡೆಯುವ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 5.30ಕ್ಕೆ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ರಾತ್ರಿ 7 ಗಂಟೆಗೆ ನರಿಂಗಾನದಲ್ಲಿ ನಡೆಯುವ ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆಯ ಲವ-ಕುಶ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8.30ಕ್ಕೆ ಕುಂಡೂರು ಜಮಾ ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜನವರಿ 11 ರಂದು ಬೆಳಿಗ್ಗೆ 11.20ಕ್ಕೆ ಉಪಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
9 January 2026
- Blogger Comments
- Facebook Comments
Subscribe to:
Post Comments (Atom)





















0 comments:
Post a Comment