ಉರ್ವ ಪೊಲೀಸರ ಮಹತ್ವದ ಕಾರ್ಯಾಚರಣೆ : 29 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಜೋಡಿ ಕೊಲೆ ಪ್ರಕರಣದ ದಂಡುಪಾಳ್ಯ ಗ್ಯಾಂಗ್ ಆರೋಪಿ ದಸ್ತಗಿರಿ - Karavali Times ಉರ್ವ ಪೊಲೀಸರ ಮಹತ್ವದ ಕಾರ್ಯಾಚರಣೆ : 29 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಜೋಡಿ ಕೊಲೆ ಪ್ರಕರಣದ ದಂಡುಪಾಳ್ಯ ಗ್ಯಾಂಗ್ ಆರೋಪಿ ದಸ್ತಗಿರಿ - Karavali Times

728x90

22 January 2026

ಉರ್ವ ಪೊಲೀಸರ ಮಹತ್ವದ ಕಾರ್ಯಾಚರಣೆ : 29 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಜೋಡಿ ಕೊಲೆ ಪ್ರಕರಣದ ದಂಡುಪಾಳ್ಯ ಗ್ಯಾಂಗ್ ಆರೋಪಿ ದಸ್ತಗಿರಿ

ಮಂಗಳೂರು, ಜನವರಿ 22, 2026 (ಕರಾವಳಿ ಟೈಮ್ಸ್) : ಉರ್ವಾ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ  113/1997, ಕಲಂ 460, 396, 400 ಐಪಿಸಿ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ಸಹಚರ (ಎ-6) ಮೂಲತಃ ಬೆಂಗಳೂರು ಹೊಸಕೋಟೆ ತಾಲೂಕಿನ ದಂಡುಪಾಳ್ಯ ನಿವಾಸಿ, ಪ್ರಸ್ತುತ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ವಿಜಯನಗರ ಕಾಲೊನಿಯಲ್ಲಿ ವಾಸ್ತವ್ಯವಿರುವ ವೆಂಕಟಪ್ಪ ಅವರ ಪುತ್ರ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಅಲಿಯಾಸ್ ಕೆ. ಕೃಷ್ಣಪ್ಪ ಅಲಿಯಾಸ್ ಕೃಷ್ಣ  (55) ಎಂಬಾತನನ್ನು ಆಂದ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ, ಮದನಪಳ್ಳೆ ಎಂಬಲ್ಲಿ ಉರ್ವ ಠಾಣಾ ಪೆÇಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. 

ಹಿಂದಿನ ಪ್ರಕರಣದ ವಿವರ

ದಿನಾಂಕ 11-10-1997 ರಂದು ಮಧ್ಯಾರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್ ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ಸಹಚರಗಳಾದ ದೊಡ್ಡ ಹನುಮ ಅಲಿಯಾಸ್ ಹನುಮ, ವೆಂಕಟೇಶ ಅಲಿಯಾಸ್ ಚಂದ್ರ, ಮುನಿಕೃಷ್ಣ ಅಲಿಯಾಸ್ ಕೃಷ್ಣ, ನಲ್ಲತಿಮ್ಮ ಅಲಿಯಾಸ್ ತಿಮ್ಮ, ಕೃಷ್ಣ ಅಲಿಯಾಸ್ ದಂಡುಪಾಳ್ಯ ಕೃಷ್ಣ ಅಲಿಯಾಸ್ ನಾಗರಾಜ,  ಚಿಕ್ಕ ಹನುಮ, ಕೃಷ್ಣಾಡು ಅಲಿಯಾಸ್ ಕೃಷ್ಣ, ವೆಂಕಟೇಶ್ ಅಲಿಯಾಸ್ ರಮೇಶ್ ಅವರುಗಳು ಮನೆಯಲ್ಲಿದ್ದ ಶ್ರೀಮತಿ ಲೂವಿಸ್ ಡಿಮೆಲ್ಲೋ (80) ಹಾಗೂ ರಂಜಿತ್ ವೇಗಸ್ (19) ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳ್ನು ದೋಚಿಕೊಂಡು ಹೋಗಿರುತ್ತಾರೆ. ಸದ್ರಿ ಆಪಾದಿತರುಗಳ ಮೇಲೆ ತನಿಖೆ ನಡೆಸಿ ದೋಷರೋಪಣಾ ಪಟ್ಟಿ ನಾಯಾಲಯಕ್ಕೆ ಸಲ್ಲಿಸಿದಂತೆ 34ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ), ಕೇಂದ್ರ ಕಾರಾಗೃಹ ಆವರಣ ಪರಪ್ಪನ ಅಗ್ರಹಾರ ಬೆಂಗಳೂರು ಅವರ ಎಸ್.ಸಿ ನಂ. 728/2010 ರಂತೆ ಸದ್ರಿ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ಇತರೆ 5 ಆಪಾದಿತರು ದೊಡ್ಡ ಹನುಮ ಅಲಿಯಾಸ್ ಹನುಮ ಸೇರಿ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿರುತ್ತದೆ.  

ಈ ಪ್ರಕರಣದಲ್ಲಿ ಆಪಾಧಿತನಾದ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ. ಕೃಷ್ಣಪ್ಪ ಅಲಿಯಾಸ್ ಕೃಷ್ಣ ತನ್ನ ಬುಧ್ಧಿವಂತಿಕೆಯನ್ನು ಬಳಸಿ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ. ಕೃಷ್ಣಪ್ಪ ಅಲಿಯಾಸ್ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡು ದಸ್ತಗಿರಿಗೆ ಸಿಗದೇ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆಂದ್ರಪ್ರದೇಶ ರಾಜ್ಯದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈತನ ಮೇಲೆ ಮಂಗಳೂರು ಜೆಎಂಎಫ್‍ಸಿ 2ನೇ ನ್ಯಾಯಾಲಯವು 2010 ರಲ್ಲಿ ಎಲ್ ಪಿ ಸಿ ವಾರೆಂಟ್ ಹೊರಡಿಸಿತ್ತು. ಈತನ ಮೇಲೆ ಕರ್ನಾಟಕ ರಾಜ್ಯದಲ್ಲಿ  ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಈ ಪತ್ತೆ ಕಾರ್ಯದಲ್ಲಿ ಉರ್ವಾ ಪೆÇಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ, ಪಿಎಸ್ಸೈಗಳಾದ ಗುರಪ್ಪ ಕಾಂತಿ, ಎಲ್. ಮಂಜುಳಾ, ಎಎಸ್ಸೈ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತ ಲಕ್ಷ್ಮಿ, ಅನಿಲ್, ಪ್ರಮೋದ್, ಆತ್ನಾನಂದ, ಹರೀಶ್ ಅವರು  ಶ್ರಮಿಸಿರುತ್ತಾರೆ. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೆÇಲೀಸ್ ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ ಹಾಗೂ ಐಜಿಪಿ ಅವರಿಗೆ ಶಿಫಾರಸ್ಸು ಮಾಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಉರ್ವ ಪೊಲೀಸರ ಮಹತ್ವದ ಕಾರ್ಯಾಚರಣೆ : 29 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಜೋಡಿ ಕೊಲೆ ಪ್ರಕರಣದ ದಂಡುಪಾಳ್ಯ ಗ್ಯಾಂಗ್ ಆರೋಪಿ ದಸ್ತಗಿರಿ Rating: 5 Reviewed By: karavali Times
Scroll to Top