ಜನವರಿ 17 ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಪ್ರವಾಸ - Karavali Times ಜನವರಿ 17 ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಪ್ರವಾಸ - Karavali Times

728x90

15 January 2026

ಜನವರಿ 17 ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಪ್ರವಾಸ

ಮಂಗಳೂರು, ಜನವರಿ 15, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 17 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.    

ಜನವರಿ 17 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 9.30ಕ್ಕೆ ಸರ್ಕ್ಯೂಟ್ ಹೌಸ್, 10 ಗಂಟೆಗೆ ಮಹಾಕಾಳಿ ಪಡ್ಪು ಅಂಡರ್ ಪಾಸ್ ಕಾಮಗಾರಿ ವೀಕ್ಷಣೆ, 11.30ಕ್ಕೆ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಭವನದ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ 94ಸಿ ಹಕ್ಕು ಪತ್ರ ವಿತರಣೆ, ಅಪರಾಹ್ನ 3 ಗಂಟೆಗೆ ತಣ್ಣೀರು ಬಾವಿ ಗಾಳಿಪಟ ಉತ್ಸವ ಕಾರ್ಯಕ್ರಮ, ರಾತ್ರಿ 7ಕ್ಕೆ ಸ್ಥಳೀಯ ಕಾರ್ಯಕ್ರಮ, ರಾತ್ರಿ ನಗರದಲ್ಲಿ ವಾಸ್ತವ್ಯ, ಜನವರಿ 18 ರಂದು ಬೆಳಿಗ್ಗೆ 7.40ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 17 ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಪ್ರವಾಸ Rating: 5 Reviewed By: karavali Times
Scroll to Top