ಮಂಗಳೂರು, ಜನವರಿ 21, 2026 (ಕರಾವಳಿ ಟೈಮ್ಸ್) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯಯವರ 156ನೇ ಜಯಂತಿ ಅಂಗವಾಗಿ ನಡೆದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ಡಾ. ಪಿ. ದಯಾನಂದ ಪೈ ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ ಸ್ಟ್ರೀಟ್ ಇಲ್ಲಿನ ವಿದ್ಯಾರ್ಥಿನಿ ಮೇಘ ಅವರು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
2025ರ ಸೆಪ್ಟೆಂಬರಿನಲ್ಲಿ ನಡೆದ ಈ ಪ್ರಬಂಧ ಸ್ಪರ್ಧೆಯಲ್ಲಿ ಕಾಲೇಜು-ಸ್ನಾತ್ತಕೋತ್ತರ ಪದವಿ ವಿಭಾಗದಲ್ಲಿ ಮೇಘ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕಾರ್ ಸ್ಟ್ರೀಟ್ ಕಾಲೇಜಿನ ತೃತೀಯ ಬಿ.ಸಿ.ಎ ವಿದ್ಯಾರ್ಥಿನಿಯಾಗಿರುವ ಮೇಘ, ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದಿದ್ದರು.
‘ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ-ಯುವಕರಿಗೆ ಗಾಂಧೀಜಿಯವರ ಪಾಠ’ ಎಂಬ ವಿಷಯದಲ್ಲಿ ಪ್ರಬಂಧ ಬರೆದಿದ್ದರು. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಅವರಿಗೆ 31 ಸಾವಿರ ರೂಪಾಯಿ ನಗದು ಪುರಸ್ಕಾರ ಲಭಿಸಿದೆ ಎಂದು ಜಿಲ್ಲಾ ವಾರ್ತಾಧಿಕಾರಿಗಳು ತಿಳಿಸಿದ್ದಾರೆ.












0 comments:
Post a Comment