ಮಂಗಳೂರು, ಜನವರಿ 21, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಮಂಗಳೂರು, ಸಿರಿ ತೋಟಗಾರಿಕೆ ಸಂಘ, ಮಂಗಳೂರು ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನ-2026 ಉದ್ಘಾಟನಾ ಸಮಾರಂಭ ಜನವರಿ 23 ರಂದು ಕದ್ರಿ ಉದ್ಯಾನವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು. ಹೂಗಳ ಮಾದರಿ ವಿನ್ಯಾಸ ಉದ್ಘಾಟನೆಯನ್ನು ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೆರವೇರಿಸಲಿದ್ದು, ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.












0 comments:
Post a Comment