ಪುತ್ತೂರು, ಜನವರಿ 02, 2026 (ಕರಾವಳಿ ಟೈಮ್ಸ್) : ಪರ್ಲಡ್ಕ ಜಂಕ್ಷನ್ನಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪುತ್ತೂರು ನಗರ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಜನವರಿ 1 ರಂದು ನಡೆದಿದೆ.
ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (36) ಎಂದು ಹೆಸರಿಸಲಾಗಿದೆ. ಈತ ಜನವರಿ 1 ರಂದು ಬೆಳಿಗ್ಗೆ ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪಿಎಸ್ಸೈ ಜನಾರ್ಧನ ಕೆ ಎಂ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದಾಗ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಈತ ತನ್ನ ಬಳಿ ನಿಷೇಧಿತ ಗಾಂಜಾ ಇರುವುದಾಗಿ ಒಪ್ಪಿಕೊಂಡಿರುತ್ತಾನೆ. ತಪಾಸಣೆ ನಡೆಸಿದಾಗ 400 ಗ್ರಾಂ ಗಾಂಜಾ ಪತ್ತೆಯಾಗಿದೆ. ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



















0 comments:
Post a Comment