ಕಾರು ಹಾಗೂ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ ಪೊಲೀಸರು : 106 ಕೆಜಿ ಗಾಂಜಾ ಸಹಿತ ಇಬ್ಬರು ಖದೀಮರ ದಸ್ತಗಿರಿ - Karavali Times ಕಾರು ಹಾಗೂ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ ಪೊಲೀಸರು : 106 ಕೆಜಿ ಗಾಂಜಾ ಸಹಿತ ಇಬ್ಬರು ಖದೀಮರ ದಸ್ತಗಿರಿ - Karavali Times

728x90

20 January 2026

ಕಾರು ಹಾಗೂ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ ಪೊಲೀಸರು : 106 ಕೆಜಿ ಗಾಂಜಾ ಸಹಿತ ಇಬ್ಬರು ಖದೀಮರ ದಸ್ತಗಿರಿ

ಪುತ್ತೂರು, ಜನವರಿ 20, 2026 (ಕರಾವಳಿ ಟೈಮ್ಸ್) : ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ ಪೊಲೀಸರು ಭಾರೀ ಪ್ರಮಾಣದ ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಹಾಗೂ ಅಬ್ದುಲ್ ಸಾದಿಕ್ (37) ಎಂದು ಹೆಸರಿಸಲಾಗಿದೆ. ಜನವರಿ 19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಪಿಎಸ್ಸೈ ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಸದ್ರಿ ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಿದ್ದಾರೆ. ಕಾರಿನ ಚಾಲಕನಲ್ಲಿ ವಿಚಾರಿಸಿದಾಗ ಆತ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಎಂದು ತಿಳಿಸಿದ್ದು, ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿ ತುಂಬಿಸಿ ಇದ್ದ ಕಟ್ಟು ಪತ್ತೆಯಾಗಿರುತ್ತದೆ. ಆ ಬಳಿಕ ಗೂಡ್ಸ್ ವಾಹನದ ಚಾಲಕನ ಬಳಿ ವಿಚಾರಿಸಿದಾಗ ಆತನೂ ಬೆಳ್ತಂಗಡಿ, ತಾಲೂಕು, ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂದು ತಿಳಿಸಿದ್ದು, ಆತನ ವಾಹನ ಪರಿಶೀಲಿಸಿದಾಗ ಸದ್ರಿ ವಾಹನದಲ್ಲಿ ಒಟ್ಟು 53 ಲಕ್ಷದ 3 ಸಾವಿರ ರೂಪಾಯಿ ಮೌಲ್ಯದ 106 ಕಿಲೋ ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿದೆ. 

ಈ ಬಗ್ಗೆ ಚಾಲಕನಲ್ಲಿ ವಿಚಾರಿಸಲಾಗಿ ಸದ್ರಿ ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿರುತ್ತಾನೆ. ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಗಾಂಜಾವನ್ನು, ಸಾಗಾಣಿಕೆಗೆ ಬಳಸಿದ ವಾಹನಗಳನ್ನು ಹಾಗೂ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೆÇೀನ್ ಗಳನ್ನು ವಶಕ್ಕೆ ಪಡೆದುಕೊಂಡು, ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಪಿಎಸ್ಸೈ ಗುಣಪಾಲ ಜೆ ಹಾಗೂ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ, ವಿನೋದ್ ಅವರು ಪಾಲ್ಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಾರು ಹಾಗೂ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ ಪೊಲೀಸರು : 106 ಕೆಜಿ ಗಾಂಜಾ ಸಹಿತ ಇಬ್ಬರು ಖದೀಮರ ದಸ್ತಗಿರಿ Rating: 5 Reviewed By: karavali Times
Scroll to Top