ಬಂಟ್ವಾಳ, ಜನವರಿ 30, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ 2023-24 ಹಾಗೂ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭವು ಫೆಬ್ರವರಿ 1 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ ಸಿ ರೋಡಿನ ಸರಕಾರಿ ನೌಕರರ ಸಭಾ ಭವನದಲ್ಲಿ ನಡೆಯಲಿದೆ.
ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಉದ್ಘಾಟಿಸುವರು. ಮಾಜಿ ಸಚಿವ ಬಿ ರಮಾನಾಥ ರೈ ಗಣ್ಯ ಅತಿಥಿಯಾಗಿ ಭಾಗವಹಿಸುವರು. ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ ಎಸ್ ಸಾಧಕರನ್ನು ಅಭಿನಂದಿಸುವರು. ಬಂಟ್ವಾಳ ತಹಶೀಲ್ದಾರ್ ಜಿ ಮಂಜುನಾಥ್, ತಾ ಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಎಇಇ ತಾರನಾಥ ಸಾಲ್ಯಾನ್ ಪಿ, ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷ ಪಿ ಲೋಕನಾಥ ಶೆಟ್ಟಿ, ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖಾ ನಿಕಟಪೂರ್ವಾಧ್ಯಕ್ಷ ಉಮಾನಾಥ ರೈ ಮೇರಾವು ಮೊದಲಾದವರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.














0 comments:
Post a Comment