ಮಂಗಳೂರು, ಜನವರಿ 29, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 31 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶ ಕೈಗೊಳ್ಳುವರು.
ಜನವರಿ 31 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 11 ಗಂಟೆಗೆ ಪುತ್ತೂರಿನಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ಟಿ.ಎಂ.ಎ ಪೈ ಸಭಾಂಗಣದಲ್ಲಿ ಆಯುಚ್ ಇಲಾಖೆ ಆಯೋಜಿಸಿರುವ ಆಯುಷ್ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಪರಾಹ್ನ 3 ಗಂಟೆಗೆ ಸಕ್ರ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಸಂಜೆ 5.50ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.














0 comments:
Post a Comment