ಮಂಗಳೂರು, ಜನವರಿ 22, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 25 ಮತ್ತು 26 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜನವರಿ 25 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಸಮಾರಂ¨sದಲ್ಲಿ ಭಾಗವಹಿಸುವರು. 10.30ಕ್ಕೆ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ-ಕಾಶಿಪಟ್ಣ ದೇವಸ್ಥಾನದ ರಾಜಗೋಪುರ ಉದ್ಘಾಟನೆ, ಸಭಾಭವನ ಮತ್ತು ಅನ್ನ ಛತ್ರ ಕಟ್ಟಡಗಳ ಶಿಲಾನ್ಯಾಸ ಸಮಾರಂಭ, 11ಕ್ಕೆ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಡಾ. ಬಿ.ಆರ್ ಅಂಬೇಡ್ಕರ್ ಭವನದ ನವೀಕೃತ ಕಟ್ಟಡದ ಉದ್ಘಾಟನೆ ಮತ್ತು 94ಸಿ ಹಕ್ಕು ಪತ್ರ ವಿತರಣೆ, ಮಧ್ಯಾಹ್ನ 12.30ಕ್ಕೆ ಕನ್ಯಾಡಿ ಗ್ರಾಮದ ಪಡ್ಪು ಕನ್ಯಾಡಿ ಶಾಲೆ ರಸ್ತೆ, ಕನ್ಯಾಡಿ ಶಾಲೆಯಿಂದ ಮೂಡಬೆಟ್ಟು, ಭೀಮಂಡೆ ರಸ್ತೆ, ಕನ್ಯಾಡಿ ಬೊಳಿಯಂಜಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟನೆ, 1.15ಕ್ಕೆ ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತ ಸಂವತ್ಸರಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಅಪರಾಹ್ನ 2 ಗಂಟೆಗೆ ಬೆಳ್ತಂಗಡಿ ತಾಲೂಕಿನ ಹಝ್ರತ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಮಖಾಮ್ ಉರೂಸ್ ಕಾರ್ಯಕ್ರಮಕ್ಕೆ ಭೇಟಿ, ಸಂಜೆ 4.30ಕ್ಕೆ ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಲೋಕಾರ್ಪಣೆ, 5 ಗಂಟೆಗೆ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಇವುಗಳ ಸಹಯೋಗದಲ್ಲಿ ಕುಡ್ಲ ಶ್ವಾನ ಪ್ರದರ್ಶನ ಕಾರ್ಯಕ್ರಮ, ನಂತರ ರಾತ್ರಿ ನಗರದಲ್ಲಿ ವಾಸ್ತವ್ಯ.
ಜನವರಿ 26 ರಂದು ಬೆಳಿಗ್ಗೆ 9ಕ್ಕೆ ನೆಹರು ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಧ್ವಜಾರೋಹಣ ಮತ್ತು ಸಂದೇಶ, 11ಕ್ಕೆ ನೆಹರೂ ಮೈದಾನದಲ್ಲಿ ಎನ್ ಎಸ್ ಯು ಐ ಮಂಗಳೂರು ಯುನಿವರ್ಸಿಟಿ ಪ್ರಸ್ತುತ ಪಡಿಸುವ ರಿಪಬ್ಲಿಕ್ ಡೇ ಕಪ್ ಕಾರ್ಯಕ್ರಮ, ಅಪರಾಹ್ನ 2.15ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.












0 comments:
Post a Comment