ಬಂಟ್ವಾಳ, ಜನವರಿ 21, 2026 (ಕರಾವಳಿ ಟೈಮ್ಸ್) : ಐಕ್ಯ ವೇದಿಕೆ (ರಿ) ಕೊಡಾಜೆ ಇದರ ನೂತನ ಕಛೇರಿಗೆ ಬೇಟಿ ನೀಡಿದ ವಿಟ್ಲ ಪೆÇಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ಅವರನ್ನು ಐಕ್ಯ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸಮಾಜದಲ್ಲಿ ಶಾಂತಿ ಸೌಹಾರ್ದತೆಯ ವಾತಾವರಣ ಮೂಡಿಸುವ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡ ಐಕ್ಯ ವೇದಿಕೆಯ ಕೆಲಸ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನೆಟ್ಲಮುಡ್ನೂರು, ಮಾಣಿ, ಅನಂತಾಡಿ ಗ್ರಾಮಗಳಿಗೆ ಸೀಮಿತವಾಗಿರುವ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಬೇಕು ಎಂದವರು ಇದೇ ವೇಳೆ ಸಲಹೆ ನೀಡಿದರು.
ಈ ಸಂದರ್ಭ ಐಕ್ಯ ವೇದಿಕೆಯ ಅಧ್ಯಕ್ಷ ಅಶ್ರಫ್ ಭಾರತ್, ಕೋಶಾಧಿಕಾರಿ ರಫೀಕ್ ಎಸ್ ಎಸ್, ಕಾರ್ಯದರ್ಶಿ ಆಬಿದ್ ನೇರಳಕಟ್ಟೆ, ಸದಸ್ಯರಾದ ಅಬೂಬಕ್ಕರ್ (ಅಬ್ಬು), ಮಜೀದ್ ಅನಂತಾಡಿ ಉಪಸ್ಥಿತರಿದ್ದರು. ವೇದಿಕೆಯ ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.













0 comments:
Post a Comment