ಮಾರ್ಚ್ 27-28 : ಬಂಟ್ವಾಳದಲ್ಲಿ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ - Karavali Times ಮಾರ್ಚ್ 27-28 : ಬಂಟ್ವಾಳದಲ್ಲಿ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ - Karavali Times

728x90

11 January 2026

ಮಾರ್ಚ್ 27-28 : ಬಂಟ್ವಾಳದಲ್ಲಿ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್

ಬಂಟ್ವಾಳ, ಜನವರಿ 11, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿನ ಸಾಹಿತ್ಯಾಸಕ್ತರ ಸಹಕಾರದೊಂದಿಗೆ ಮುಂದಿನ ಮಾರ್ಚ್ 27 ಹಾಗೂ 28 ರಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಘೋಷಿಸಿದ್ದಾರೆ.

ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಕಸಾಪ ಜಿಲ್ಲಾ ಸಮಿತಿ ಏರ್ಪಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ಮೆರವಣಿಗೆ ಸಹಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಗೋಷ್ಠಿಗಳೊಂದಿಗೆ ಸ್ಥಳೀಯ ಮತ್ತು ಜಿಲ್ಲೆಯ ಪ್ರತಿಭಾನ್ವಿತರಿಗೆ ಅವಕಾಶ ನೀಡುವುದು ಹಾಗೂ ಸಮ್ಮೇಳನದಲ್ಲಿ ಪುಸ್ತಕಗಳ ಬಿಡುಗಡೆಗೆ ಸಾಹಿತಿಗಳಿಗೆ ಅವಕಾಶ ನೀಡಲಾಗುವುದು ಎಂದರು. ಸಭೆಯಲ್ಲಿ ವಿಶೇಷವಾಗಿ ಗಡಿನಾಡ ಕನ್ನಡ-ಕನ್ನಡಿಗರ ಸಮಸ್ಯೆಯ ಬಗ್ಗೆ ಹಾಗೂ ಎಲ್ಲ ಜನರಿಗೂ ಆಸಕ್ತಿ ಮೂಡಿಸುವಂತಹ ಗೋಷ್ಠಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬ ಆಶಯ ವ್ಯಕ್ತವಾಯಿತು.

ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗೌರವ ಕಾರ್ಯದರ್ಶಿಗಳಾದ ವಿ ಸು ಭಟ್, ರಮಾನಂದ ನೂಜಿಪ್ಪಾಡಿ, ಕೋಶಾಧಿಕಾರಿ ಅಬ್ದುಲ್ ರಹಮಾನ್ ಡಿ ಬಿ, ಜಿಲ್ಲಾ ಕಸಾಪ ಸದಸ್ಯ ಪೂವಪ್ಪ ನೇರಳಕಟ್ಟೆ, ಸುಭಾಶ್ಚಂದ್ರ ಜೈನ್, ಕಸಾಪ ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪ್ರಮುಖರಾದ ಕೈಯೂರು ನಾರಾಯಣ ಭಟ್, ದೇವಪ್ಪ ಕುಲಾಲ್ ಪಂಜಿಕಲ್ಲು, ಎಚ್ಕೆ ನಯನಾಡು, ಸಂಕಪ್ಪ ಶೆಟ್ಟಿ, ಜಯಾನಂದ ಪೆರಾಜೆ,  ಪೆÇ್ರ ಎಂ ಡಿ ಮಂಚಿ, ಜಯರಾಮ ಪಡ್ರೆ, ಸೋನಿತಾ ಕೆ ನೇರಳಕಟ್ಟೆ, ಉಮ್ಮರ್ ಮಂಚಿ, ಸಾಯಿರಾಮ ನಾಯಕ್, ಗೀತಾ ಕೋಂಕೋಡಿ, ಸನ್ಮತಿ ಜಯಕೀರ್ತಿ, ದಾಮೋದರ ಏರ್ಯ, ಶ್ರೀಕಲಾ ಕಾರಂತ ಸಹಿತ ಹಲವು ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರಾಜೇಶ್ವರಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಬೂಬಕ್ಕರ್ ಅಮ್ಮಂಜೆ ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 27-28 : ಬಂಟ್ವಾಳದಲ್ಲಿ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ Rating: 5 Reviewed By: karavali Times
Scroll to Top