ಮಂಗಳೂರು, ಜನವರಿ 18, 2026 (ಕರಾವಳಿ ಟೈಮ್ಸ್) : ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಿದ ಕದ್ರಿ ಪೊಲೀಸರು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ-ಚುನಯಮಕ್ಕಿಲ್ ನಿವಾಸಿ ಮನೋಜ್ ಜೋಸೆಫ್ ಎಂಬವರ ಪುತ್ರ ಜೂಡ್ ಮ್ಯಾಥ್ಯೂ (20) ಎಂದು ಹೆಸರಿಸಲಾಗಿದೆ.
ಶನಿವಾರ ಮಂಗಳೂರು ಪೂರ್ವ ಠಾಣಾಧಿಕಾರಿ ಅವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಪೂರ್ವ ಪೆÇಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಯುವಕನೊಬ್ಬನು ಬೈಕಿನಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಎನ್.ಎಸ್ ಬೈಕ್ ಸಹಿತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.













0 comments:
Post a Comment