ಪುತ್ತೂರು, ಜನವರಿ 21, 2026 (ಕರಾವಳಿ ಟೈಮ್ಸ್) : ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಮುದ್ವೇಷದ ಭಾಷಣ ಮಾಡಿದ ಡಾ ಕಲ್ಲಡ್ಕ ಪ್ರಭಾಕರ ಭಟ್, ಅದನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ದ ರಾಮಚಂದ್ರ ಎಂಬವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪುತ್ತೂರು ನಿವಾಸಿ ರಾಮಚಂದ್ರ ಕೆ ಎಂಬವರು ಠಾಣೆಗೆ ದೂರು ನೀಡಿದ್ದು, ಜನವರಿ 12ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿ ಡಾ ಕಲ್ಲಡ ಪ್ರಭಾಕರ ಭಟ್ ಅವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೆÇೀಷಕರನ್ನುದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮು ದ್ವೇಷದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ. ಸದ್ರಿ ಭಾಷಣವನ್ನು ವಿಕಸನ ಟಿವಿ ಎಂಬ ಹೆಸರಿನ ಯೂಟ್ಯೂಬ್ ಚಾನಲಿನಲ್ಲಿ ಪ್ರಸಾರ ಮಾಡಿರುತ್ತಾರೆ. ಆದ್ದರಿಂದ ಸದ್ರಿ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಡಾ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಸದ್ರಿ ಭಾಷಣವನ್ನು ಪ್ರಸಾರ ಮಾಡಿದ ವಿಕಸನ ಟಿವಿ ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 10/2026, ಕಲಂ 196, 299, 302, 353(2), 3(5) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.












0 comments:
Post a Comment