ಪುತ್ತೂರಿನಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಉದ್ಘಾಟನೆ
ಪುತ್ತೂರು, ಜನವರಿ 10, 2026 (ಕರಾವಳಿ ಟೈಮ್ಸ್) : ಬೆಳೆದ ಬೆಳೆಗಳನ್ನು ತಾವೇ ಸಂಸ್ಕರಿಸಿ ಮಾರುಕಟ್ಟೆಗೆ ನೀಡಲು ಅವಕಾಶ ಇದೆ. ಅದಕ್ಕಾಗಿ ಏಜೆನ್ಸಿಗಳ ಮೊರೆ ಹೋಗಬೇಕಾಗಿಲ್ಲ. ಕೃಷಿಯಲ್ಲಿ ಆಧುನಿಕತೆ ಹಾಗೂ ವೈಜ್ಞಾನಿಕ ಯಾಂತ್ರೀಕೃತ ಕ್ರಮ ನೆಚ್ಚಿಕೊಂಡರೆ ಆದಾಯ ಹೆಚ್ಚಳ ಆಗಲು ಸಾಧ್ಯವಿದೆ. ನಮ್ಮ ಸರಕಾರ ರೈತರ ಜೊತೆಗಿದೆ ಎಂದು ರಾಜ್ಯ ಕೃಷಿ ಸಚಿವ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ಚೆಲುವರಾಯ ಸ್ವಾಮಿ ಹೇಳಿದರು.
ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಜಿಲ್ಲೆ, ಜಂಟಿ ಕೃಷಿ ನಿದೇರ್ಶಕರ ಕಚೇರಿ ಮಂಗಳೂರು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಕೇಂದ್ರ, ಪುತ್ತೂರು ಹಾಗೂ ರೈತ ಕುಡ್ಲ ಪ್ರತಿಷ್ಠಾನ (ರಿ), ಪುತ್ತೂರು ಇವುಗಳ ಇದರ ಸಹಯೋಗದೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ಶನಿವಾರ ಆರಂಭಗೊಂಡ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೆ ನಮ್ಮ ಸರಕಾರ ಸಾಕಷ್ಟು ಪೆÇ್ರೀತ್ಸಾಹ ನೀಡಿದೆ. ರಾಜ್ಯ ಕಾಂಗ್ರೆಸ್ ಸರಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನುಡಿದಂತೆ ನಡೆದುಕೊಂಡಿದೆ. ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೂ ತಲುಪುತ್ತಿದೆ. ದಕ್ಷಿಣ ಜಿಲ್ಲೆಯಲ್ಲಿ ಕೃಷಿ ಕಾಲೇಜು ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.
ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಸೋಮವಾರದವರೆಗೂ ನಡೆಯಲಿದ್ದು, ಹಲವು ಮಳಿಗೆಗಳು ಜನರನ್ನು ಆಕರ್ಷಿಸುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ನಗರದ ಮಹದೇವಪ್ಪ ಕೃಷಿ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ಶಾಸಕಿ ಕು ಭಾಗೀರಥಿ ಮುರುಳ್ಯ, ಎಂಎಲ್‍ಸಿ ಡಾ ಮಂಜುನಾಥ ಭಂಡಾರಿ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಜಿಲ್ಲಾ ನಿರ್ದೇಶಕ ಬಾಬು ನಾಯ್ಕ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಗೌಡ ಎಸ್ ಆರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷೆ ಶ್ರೀಮತಿ ಲಾವಣ್ಯ ಬಳ್ಳಾಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಕೃಷಿಕ ಸಮಾಜ ದ.ಕ. ಜಿಲ್ಲಾ ಸಮಿತಿ ವತಿಯಿಂದ ಸಚಿವ ಚೆಲುವರಾಯಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಪಂಜಿಗುಡ್ಡೆ ಈಶ್ವರ ಭಟ್ ಪುತ್ತೂರು, ಕೆ ಪ್ರೇಮನಾಥ ಶೆಟ್ಟಿ ಬಂಟ್ವಾಳ, ಜಿ ಟಿ ರಾಜಾರಮ ಭಟ್ ಉಳ್ಳಾಲ, ಕಾಂತಪ್ಪ ಪೂಜಾರಿ ಬೆಳ್ತಂಗಡಿ, ಅರವಿಂದ ಮುಳ್ಳಂಕೊಚ್ಚಿ ಅಲಂಕಾರು, ಕಡಬ, ಡಿ ಎನ್ ಚಂದ್ರಶೇಖರ ಸುಳ್ಯ, ಶ್ರೀಮತಿ ಸಿರಿಲಿಯಾ ಸಲ್ದಾನಾ ಮಂಗಳೂರು, ಶ್ರೀಮತಿ ಪ್ರಿಸಿಯು ಎಚ್ ಡಿ ಸೋಜ ಮುಲ್ಕಿ, ನಾಗಪ್ಪ ಪೂಜಾರಿ ಮೂಡಬಿದ್ರೆ ಅವರಿಗೆ ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು. ವೆಂಕಪ್ಪ ಜಿ ಗೋಳ್ತಮಜಲು ಬಂಟ್ವಾಳ, ಲಿಂಗಪ್ಪ ಮಡಿವಾಳ ಬೆಳ್ತಂಗಡಿ, ಮೋಹನದಾಸ ಕಾಮತ್ ಪುತ್ತೂರು, ಶೀನಪ್ಪ ಪೂಜಾರಿ ಕಡಬ, ತೀರ್ಥರಾಮ ಬೈತಡ್ಕ ಸುಳ್ಯ ಅವರಿಗೆ ಅತ್ಯುತ್ತಮ ಕೃಷಿ ಕೂಲಿ ಕಾರ್ಮಿಕ ಪುರಸ್ಕಾರ ನೀಡಲಾಯಿತು. ಕೇಶವ ಗೌಡ ಅಮೈಗುತ್ತು, ಕೆ ಪಿ ಮಹಮ್ಮದ್ ಸಾದಿಕ್ ಹಾಗೂ ಪುರುಷೋತ್ತಮ ಬಿ ಅವರಿಗೆ ಕೃಷಿ ಸಲಕರಣೆ ಉತ್ಪಾದಕ ಉದ್ಯಮಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕೃಷಿ ಮೇಳ ಸಮಿತಿ ಕಾರ್ಯಾಧ್ಯಕ್ಷ ಕೆ ಪದ್ಮನಾಭ ರೈ ಕಲ್ಲಡ್ಕ ಸ್ವಾಗತಿಸಿ, ಸಂಚಾಲಕ ಸಂಜೀವ ಮಠಂದೂರು ಪ್ರಸ್ತಾವನೆಗೈದರು.
ಕಾರ್ಯಕ್ರಮಕ್ಕೂ ಮೊದಲು ಮಹಾಲಿಂಗೇಶ್ವರ ದೇವಸ್ಥಾನ ವಠಾರದಿಂದ ಮೆರವಣಿಗೆ ಮೂಲಕ ಅತಿಥಿಗಳನ್ನು ಕರೆತರಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಮಳಿಗೆಗಳು, ಸಸ್ಯ ಜಾತ್ರೆ, ಆಹಾರ ಮೇಳ, ವಿವಿಧ ಕೃಷಿ ಮಾಹಿತಿ ಗೋಷ್ಠಿಗಳು, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.






























0 comments:
Post a Comment