ಪುತ್ತೂರು, ಜನವರಿ 08, 2026 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಜಿಲ್ಲೆ, ಜಂಟಿ ಕೃಷಿ ನಿದೇರ್ಶಕರ ಕಚೇರಿ ಮಂಗಳೂರು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಕೇಂದ್ರ, ಪುತ್ತೂರು ಹಾಗೂ ರೈತ ಕುಡ್ಲ ಪ್ರತಿಷ್ಠಾನ (ರಿ), ಪುತ್ತೂರು ಇವುಗಳ ಇದರ ಸಹಯೋಗದೊಂದಿಗೆ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಜನವರಿ 10 ಶನಿವಾರ, 11 ಭಾನುವಾರ ಹಾಗೂ 12 ಸೋಮವಾರ ದಿನಗಳಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯಲಿದೆ.
ಸ್ಪೀಕರ್ ಯು ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭವನ್ನು ರಾಜ್ಯ ಕೃಷಿ ಸಚಿವ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ಚೆಲುವರಾಯ ಸ್ವಾಮಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಳಿಗೆಗಳನ್ನು ಉದ್ಘಾಟಿಸುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ನಗರದ ಮಹದೇವಪ್ಪ ಕೃಷಿ ಧ್ವಜಾರೋಹಣ ನೆರವೇರಿಸುವರು.
ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಮೆರವಣಿಗೆ, ಮಳಿಗೆಗಳ ಉದ್ಘಾಟನೆ, ಕೃಷಿ ಮೇಳ, ಸಸ್ಯ ಜಾತ್ರೆ, ಆಹಾರ ಮೇಳ, ಸಾಧಕ ರೈತರಿಗೆ, ಕೃಷಿ ಸಲಕರಣೆಗಳ ಉದ್ಯಮಿಗಳಿಗೆ, ಕೃಷಿ ಕೂಲಿ ಕಾರ್ಮಿಕರಿಗೆ ಸನ್ಮಾನ, ವಿವಿಧ ಕೃಷಿ ಮಾಹಿತಿ ಗೋಷ್ಠಿಗಳು, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.




















0 comments:
Post a Comment